ಬಿಜೆಪಿ-ಜೆವಿಎಂ ವಿಲೀನಕ್ಕೆ ಚುನಾವಾಣಾ ಆಯೋಗದ ಮಾನ್ಯತೆ

ರಾಂಚಿ, ಮಾರ್ಚ್ 8: ಭಾರತೀಯ ಜನತಾ ಪಕ್ಷದ ಜೊತೆ ಜಾರ್ಖಂಡ್ ವಿಕಾಸ್ ಮೋರ್ಚಾ ಪ್ರಜಾತಾಂತ್ರಿಕ (ಜೆವಿಎಂ) ವಿಲೀನಕ್ಕೆ ಕೇಂದ್ರ ಚುನಾವಣಾ ಆಯೋಗ ಮಾನ್ಯತೆ ನೀಡಿದೆ.

ಜಾರ್ಖಂಡ್ ರಾಜ್ಯದಲ್ಲಿ ಸೊರೇನ್ ಸರ್ಕಾರ ರಚನೆಯಾದ ಒಂದು ತಿಂಗಳೊಳಗೆ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಉಂಟಾಗಿದ್ದು ನೆನಪಿರಬಹುದು. ಮುಖ್ಯಮಂತ್ರಿ ಹೇಮಂತ್ ಸೊರೆನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಜಾರ್ಖಂಡ್ ವಿಕಾಸ್ ಮೋರ್ಚಾ ಪ್ರಜಾತಾಂತ್ರಿಕ (ಜೆವಿಎಂ) ಹಿಂಪಡೆದುಕೊಂಡಿತ್ತು. ಈಗ ಬಿಜೆಪಿ ಜೊತೆ ಜೆವಿಎಂ ವಿಲೀನವಾಗಿದೆ. ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ) ಹಾಗೂ ಭಾರತೀಯ ಜನತಾ ಪಕ್ಷದ ವಿಲೀನ ಫೆಬ್ರವರಿ 17ರಂದು ನಡೆದಿದ್ದರೂ ಆಯೋಗದ ಮಾನ್ಯತೆ ಸಿಕ್ಕರಲಿಲ್ಲ. ಈಗ ಚುನಾವಣಾ ಆಯೋಗದ ಮಾನ್ಯತೆ ಸಿಕ್ಕಿದೆ ಎಂದು ಜೆವಿಎಂ ಪಕ್ಷದ ಮುಖ್ಯಸ್ಥ ಬಾಬುಲಾಲ್ ಮರಾಂಡಿ ತಿಳಿಸಿದ್ದಾರೆ.

ಈಗ ಜಾರ್ಖಂಡ್ ರಾಜ್ಯದ ಪ್ರಾದೇಶಿಕ ಪಕ್ಷವಾಗಿ ಮಾತ್ರ ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ) ಗುರುತಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನಡ್ಡಾ ಭೇಟಿ ಮಾಡಿದ ನಂತರ ಬೆಳವಣಿಗೆ

ನಡ್ಡಾ ಭೇಟಿ ಮಾಡಿದ ನಂತರ ಬೆಳವಣಿಗೆ

ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಕಳೆದ ವಾರ ಜೆವಿಎಂ ಶಾಸಕ ಪ್ರದೀಪ್ ಯಾದವ್ ಅವರು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಇದಾದ ಬಳಿಕ ಪ್ರದೀಪ್ ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಇದೇ ರೀತಿ ಬಂಧು ಟಿರ್ಕೆ ಅವರಿಗೂ ನೋಟಿಸ್ ನೀಡಲಾಗಿದೆ.

ಜೆವಿಎಂ ಮೂರು ಸ್ಥಾನ ಗಳಿಸಿತ್ತು

ಜೆವಿಎಂ ಮೂರು ಸ್ಥಾನ ಗಳಿಸಿತ್ತು

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆವಿಎಂ ಮೂರು ಸ್ಥಾನ ಗಳಿಸಿತ್ತು. ಬಾಬುಲಾಲ್ ಮರಾಂಡಿ ಅಲ್ಲದೆ ಪ್ರದೀಪ್ ಯಾದವ್ ಹಾಗೂ ಬಂಧು ಟಿರ್ಕೆ ಇನ್ನಿಬ್ಬರು ಶಾಸಕರು. ಪ್ರದೀಪ್ ಹಾಗೂ ಬಂಧು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆವಿಎಂನ ಏಕೈಕ ಶಾಸಕ ಬಾಬುಲಾಲ್ ಅವರು ಪಕ್ಷವನ್ನೇ ಬಿಜೆಪಿ ಜೊತೆಗೆ ವಿಲೀನಗೊಳಿಸುತ್ತಿದ್ದಾರೆ.

ಜಾರ್ಖಂಡ್ ವಿಕಾಸ್ ಮೋರ್ಚಾ (ಪ್ರಜಾತಾಂತ್ರಿಕ) ಕಾಯ್ದೆ

ಜಾರ್ಖಂಡ್ ವಿಕಾಸ್ ಮೋರ್ಚಾ (ಪ್ರಜಾತಾಂತ್ರಿಕ) ಕಾಯ್ದೆ

'ನಮ್ಮ ಪಕ್ಷವಾದ ಜಾರ್ಖಂಡ್ ವಿಕಾಸ್ ಮೋರ್ಚಾ (ಪ್ರಜಾತಾಂತ್ರಿಕ) 2019ರ ಡಿ. 24ರಂದು ನಿಮ್ಮ (ಹೇಮಂತ್ ಸೊರೆನ್) ನಾಯಕತ್ವದ ಸರ್ಕಾರಕ್ಕೆ ಷರತ್ತುರಹಿತ ಬೆಂಬಲ ನೀಡುವ ಪತ್ರವನ್ನು ಸಲ್ಲಿಸಿತ್ತು. ಆದರೆ ಯುಪಿಎ ಮೈತ್ರಿಕೂಟದ ಭಾಗವಾದ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಅದರ ಕುರಿತು ಇಂದಿನ ಪ್ರತಿಷ್ಠಿತ ಪತ್ರಿಕೆಯಲ್ಲಿ ವರದಿಯಾಗಿದೆ. ಹೀಗಾಗಿ ನಮ್ಮ ಪಕ್ಷ ತನ್ನ ಬೆಂಬಲವನ್ನು ಪರಾಮರ್ಶಿಸಿದೆ ಹಾಗೂ ನಿಮ್ಮ ನಾಯಕತ್ವದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದುಕೊಳ್ಳುತ್ತಿದೆ' ಎಂದು ಪತ್ರದಲ್ಲಿ ಬಾಬುಲಾಲ್ ಹೇಳಿದ್ದಾರೆ.

ಬಿಜೆಪಿ ಜತೆ ಜೆವಿಎಂ ವಿಲೀನ

ಬಿಜೆಪಿ ಜತೆ ಜೆವಿಎಂ ವಿಲೀನ

ರಾಜ್ಯದಲ್ಲಿ ಪ್ರಮುಖ ವಿರೋಧಪಕ್ಷವಾಗಿರುವ ಬಿಜೆಪಿ ಜತೆ ಜೆವಿಎಂ ವಿಲೀನಗೊಳ್ಳಲಿದ್ದು, ಜೆವಿಎಂ ಸ್ಥಾಪಕ ಬಾಬುಲಾಲ್ ಘೋಷಿಸಿದ್ದಾರೆ. ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಪ್ರದೀಪ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಕಿತ್ತುಹಾಕಲಾಗಿದೆ. ಆದರೆ ಜೆವಿಎಂ ತನ್ನ ಬೆಂಬಲ ಹಿಂದಕ್ಕೆ ಪಡೆದುಕೊಂಡರೂ ಹೇಮಂತ್ ಸೊರೆನ್ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ. 81 ಸದಸ್ಯರ ಸದನದಲ್ಲಿ ಸರ್ಕಾರ 47 ಶಾಸಕರ ಬಲ ಹೊಂದಿದೆ. 25 ಸದಸ್ಯರನ್ನು ಹೊಂದಿರುವ ಬಿಜೆಪಿ, ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಇನ್ನೂ ಘೋಷಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+