Breaking; ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ

ರಾಂಚಿ, ಮೇ 07; ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ಹತೋಟಿಗೆ ತಂದಿವೆ.

ಶನಿವಾರ ಮಧ್ಯಾಹ್ನ ಜಾರ್ಖಂಡ್‌ ರಾಜ್ಯದ ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಜೆಮ್‌ಶೆಡ್‌ಪುರ ಜಿಲ್ಲಾಡಳಿತ ಟಾಟಾ ಸ್ಟೀಲ್ ಫ್ಯಾಕ್ಟರಿ ಜೊತೆ ನಿರಂತರ ಸಂಪರ್ಕದಲ್ಲಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲಾ ಉದ್ಯೋಗಿಗಳಿಗೆ ತುರ್ತು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Blast And Fire At Tata Steel Factory Jharkhand

ಟಾಟಾ ಸ್ಟೀಲ್‌ ಘಟಕದ ಬ್ಯಾಟಕಿ ಕೋಕ್ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಬಳಿಕ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದವು.

ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಒಬ್ಬ ಕಾರ್ಮಿಕ ಎದೆ ನೋವು ಎಂದು ಹೇಳಿದ್ದಾನೆ. ಮೂವರ ಆರೋಗ್ಯ ಸ್ಥಿರವಾಗಿದೆ. ಸ್ಫೋಟಕ್ಕೆ ಕಾರಣವೇನು? ಎಂದು ತನಿಖೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+