ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ

|
Google Oneindia Kannada News

ರಾಂಚಿ, ಮೇ 07; ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ಹತೋಟಿಗೆ ತಂದಿವೆ.

ಶನಿವಾರ ಮಧ್ಯಾಹ್ನ ಜಾರ್ಖಂಡ್‌ ರಾಜ್ಯದ ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಜೆಮ್‌ಶೆಡ್‌ಪುರ ಜಿಲ್ಲಾಡಳಿತ ಟಾಟಾ ಸ್ಟೀಲ್ ಫ್ಯಾಕ್ಟರಿ ಜೊತೆ ನಿರಂತರ ಸಂಪರ್ಕದಲ್ಲಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲಾ ಉದ್ಯೋಗಿಗಳಿಗೆ ತುರ್ತು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಅತಿದೊಡ್ಡ ಕ್ಯಾನ್ಸರ್ ಆಸ್ಪತ್ರೆಗಾಗಿ ಶ್ರಮಿಸಿದ ಟಾಟಾ, ಟಿಟಿಡಿ ಟ್ರಸ್ಟ್ ಅತಿದೊಡ್ಡ ಕ್ಯಾನ್ಸರ್ ಆಸ್ಪತ್ರೆಗಾಗಿ ಶ್ರಮಿಸಿದ ಟಾಟಾ, ಟಿಟಿಡಿ ಟ್ರಸ್ಟ್

Blast And Fire At Tata Steel Factory Jharkhand

ಟಾಟಾ ಸ್ಟೀಲ್‌ ಘಟಕದ ಬ್ಯಾಟಕಿ ಕೋಕ್ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಬಳಿಕ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದವು.

ರಷ್ಯಾದೊಂದಿಗೆ ವ್ಯಾಪಾರ ಸ್ಥಗಿತಗೊಳಿಸಲು ಟಾಟಾ ಸ್ಟೀಲ್ ನಿರ್ಧಾರ ರಷ್ಯಾದೊಂದಿಗೆ ವ್ಯಾಪಾರ ಸ್ಥಗಿತಗೊಳಿಸಲು ಟಾಟಾ ಸ್ಟೀಲ್ ನಿರ್ಧಾರ

ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಒಬ್ಬ ಕಾರ್ಮಿಕ ಎದೆ ನೋವು ಎಂದು ಹೇಳಿದ್ದಾನೆ. ಮೂವರ ಆರೋಗ್ಯ ಸ್ಥಿರವಾಗಿದೆ. ಸ್ಫೋಟಕ್ಕೆ ಕಾರಣವೇನು? ಎಂದು ತನಿಖೆ ನಡೆಸಲಾಗುತ್ತಿದೆ.

English summary
There was a blast in battery of coke plant at Tata Steel factory. Jamshedpur district of Jharkhand. Fire tenders immediately reached & situation was brought to control.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X