• search
  • Live TV
ರಾಂಚಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈಶಾನ್ಯ ರಾಜ್ಯಗಳ ಪ್ರತಿಭಟನೆಗೆ ಕಾಂಗ್ರೆಸ್ ನೇರ ಹೊಣೆ: ಮೋದಿ

|

ರಾಂಚಿ, ಡಿಸೆಂಬರ್ 15: ಪೌರತ್ವ ಕಾಯ್ದೆ ಹೆಸರಿನಲ್ಲಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಜಾರ್ಖಂಡ್ ನಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಯಾರು ನಡೆಸುತ್ತಿದ್ದಾರೆ, ಅದಕ್ಕೆ ಯಾರ ಕುಮ್ಮಕ್ಕು ಇದೆ ಎಂಬುದನ್ನು ನೀವು ಸುಲಭವಾಗಿ ಪತ್ತೆ ಹಚ್ಚಬಹುದು ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ನಿಮಗೆ ತಿಳಿದಿರಬೇಕಾದ ಪ್ರಮುಖ ಮಾಹಿತಿ

ಈ ಸಮಾವೇಶದಲ್ಲಿ ಇರುವ ನೀವು ಯಾವುದೇ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ, ನಿಮಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಮ್ಮು ಮತ್ತು ಕಾಶ್ಮೀರ ದಲಲ್ಲಿ ಆರ್ಟಿಕಲ್ 370 ರದ್ದು ಪಡಿಸಿದ ನಂತರ, ರಾಮ ಜನ್ಮಭೂಮಿಗೆ ಸಂಬಂಧಿತ ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ಪಾಕಿಸ್ತಾನ ವಿದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ, ಅದೇ ಕೆಲಸವನ್ನು ಕಾಂಗ್ರೆಸ್ ದೇಶದ ಒಳಗಡೆ ಮಾಡುತ್ತಿದೆ ಎಂದರು.

ಈ ಹಿಂಸಾತ್ಮಕ ಕೃತ್ಯಗಳಲ್ಲಿ ನೀವು ಭಾಗಿಯಾಗಿಲ್ಲ ಎನ್ನುವದೇ ಖುಷಿ ವಿಚಾರ. ಕಾಂಗ್ರೆಸ್ ಮತ್ತು ಆ ಪಕ್ಷದ ಬೆಂಬಲಿಗರು ಪ್ರತಿಭಟನೆಯ ಬೆಂಕಿ ಹರಡುತ್ತಾರೆ. ಅದು ಸಾಧ್ಯವಾಗದಿದ್ದರೆ, ಅವರೇ ಬೆಂಕಿ ಹಚ್ಚಲು ಪ್ರಾರಂಭಿಸುತ್ತಾರೆ ಎಂದು ಟೀಕಿಸಿದರು. ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಇನ್ನೂ ಕರ್ಫ್ಯೂ ಮುಂದುವರೆದಿದೆ.

ಪೌರತ್ವ ಕಾಯ್ದೆ ಬದಲಾಯಿಸುವ ಅಧಿಕಾರ ರಾಜ್ಯಗಳಿಗಿಲ್ಲ: ಕೇಂದ್ರ

ದೆಹಲಿ, ಪಶ್ಚಿಮ ಬಂಗಾಳಗಳಲ್ಲಿ ಪೌರತ್ವ ಕಾಯ್ದೆಯ ವಿರುದ್ದ ಪ್ರತಿಭಟನೆಗಳು ನಡೆಯುತ್ತಿವೆ. ಆಸ್ಸಾಮ್ ನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಡಿದ್ದರೂ ಪೊಲೀಸರು ಖಚಿತ ಪಡಿಸಿಲ್ಲ.

English summary
Prime Minister Narendra Modi has pledged that the Congress party is directly responsible for the protests in the northeastern states in the name of Citizenship Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X