ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು ಮಂಜೂರು

|
Google Oneindia Kannada News

ರಾಂಚಿ, ಏಪ್ರಿಲ್ 22; ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು ಸಿಕ್ಕಿದೆ. ಜಾರ್ಖಂಡ್ ಹೈಕೋರ್ಟ್ ಆರೋಗ್ಯದ ಕಾರಣವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.

ಶುಕ್ರವಾರ ಜಾರ್ಖಂಡ್ ಹೈಕೋರ್ಟ್ ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್ ನೀಡಬೇಕು, 10 ಲಕ್ಷ ರೂ. ದಂಡ ಮೊತ್ತವನ್ನು ಪಾವತಿ ಮಾಡಬೇಕು ಎಂದು ಆದೇಶಿಸಿದೆ.

ಮೇವು ಹಗರಣ: ಲಾಲೂ ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ ಮೇವು ಹಗರಣ: ಲಾಲೂ ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ

Fodder Scam Lalu Prasad Yadav Gets Bail

ಎನ್‌ಎನ್‌ಐ ಜೊತೆ ಮಾತನಾಡಿದ ಲಾಲೂ ಪ್ರಸಾದ್ ಪರ ವಕೀಲರು ಶೀಘ್ರವೇ ಅವರು ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಮೇವು ಹಗರಣದ ವಿವಿಧ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಹದಗೆಟ್ಟಿತ್ತು.

 ಮೇವು ಹಗರಣ 5ನೇ ಕೇಸ್: ಲಾಲೂ ಪ್ರಸಾದ್ ಯಾದವ್ ತಪ್ಪಿತಸ್ಥ ಮೇವು ಹಗರಣ 5ನೇ ಕೇಸ್: ಲಾಲೂ ಪ್ರಸಾದ್ ಯಾದವ್ ತಪ್ಪಿತಸ್ಥ

2021ರ ಫೆಬ್ರವರಿಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅಪರಾಧಿ ಎಂದು ತೀರ್ಪು ನೀಡಿತ್ತು. 5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು, 60 ಲಕ್ಷ ರೂ. ದಂಡ ಹಾಕಿತ್ತು.

ಏಮ್ಸ್ ಆಸ್ಪತ್ರೆಗೆ ದಾಖಲಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಏಮ್ಸ್ ಆಸ್ಪತ್ರೆಗೆ ದಾಖಲಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್

ಇದಕ್ಕೂ ಮೊದಲು ಧುಮ್ಕಾ ಖಜಾನೆಯಿಂದ ಹಣ ವರ್ಗಾವಣೆ ಪ್ರಕರಣದಲ್ಲಿ 14 ವರ್ಷಗಳ ಜೈಲು ಶಿಕ್ಷೆ ಘೋಷಿಸಲಾಗಿತ್ತು. ಸಿಬಿಐ ಕೋರ್ಟ್ ಶಿಕ್ಷೆ ಘೋಷಣೆ ಬಳಿಕ ಲಾಲೂ ಪ್ರಸಾದ್ ಯಾದವ್‌ ಬಿರ್ಸಾ ಮುಂಡಾ ಜೈಲಿನಲ್ಲಿದ್ದರು. ಬಳಿಕ ರಾಂಚಿಯ ಜೈಲಿಗೆ ಸ್ಥಳಾಂತರಗೊಂಡಿದ್ದರು.

ಬಹುಕೋಟಿ ರೂಪಾಯಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 5 ಪ್ರಕರಣ ದಾಖಲಾಗಿದೆ. ಎಲ್ಲಾ ಪ್ರಕರಣದಲ್ಲಿಯೂ ಲಾಲೂ ಪ್ರಸಾದ್ ಯಾದವ್ ಮುಖ್ಯ ಅಪರಾಧಿ. ಮೇವು ಹಗರಣದಲ್ಲಿ ಒಟ್ಟು 99 ಆರೋಪಿಗಳಿದ್ದರು. 24 ಆರೋಪಿಗಳು ಖುಲಾಸೆಗೊಂಡಿದ್ದಾರೆ.

English summary
Bihar former chief minister Lalu Prasad Yadav get bail in the fodder scam. Jharkhand high court granted bail for RJD chief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X