ಜಾರ್ಖಂಡ್ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಪ್ರಿಯಾಂಕಾ ಗಾಂಧಿ

ರಾಂಚಿ, ನವೆಂಬರ್ 15: ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಗ್ರಪಂಕ್ತಿಯಲ್ಲಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನವನ್ನೇ ಪಡೆದಿಲ್ಲ!

ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿದೆ. ಜೊತೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರಿದ್ದಾರೆ.

ಈ ಬಗ್ಗೆ ಪಕ್ಷದ ಪ್ರಮುಖರೊಬ್ಬರನ್ನು ವಿಚಾರಿಸಿದಾಗ, "ಜಾರ್ಖಂಡನ್ ನಲ್ಲಿ ಒಟ್ಟು ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಇನ್ನು ಎಲ್ಲ ಸ್ಟಾರ್ ಪ್ರಚಾರಕರ ಹೆಸರನ್ನೂ ಘೋಷಣೆ ಮಾಡಿಲ್ಲ. ಮುಂದೆ ಪ್ರಿಯಾಂಕಾ ಗಾಂಧಿ ಅವರನ್ನೂ ಈ ಪಟ್ಟಿಗೆ ಸೇರಿಸಲಾಗುತ್ತದೆ" ಎಂದಿದ್ದಾರೆ.

Jharkand: Priyanka Gandhi Is Not In Star Campaigners List

ಕಾಂಗ್ರೆಸ್ ಇನ್ನೂ ನಾಲ್ಕು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಜಾರ್ಖಂಡ್ ವಿಧಾನಸಭೆಗೆ 5 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ನವೆಂಬರ್ 30 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 7, ಡಿ. 12, ಡಿ. 16, ಡಿ.20 ರಂದು ಕ್ರಮವಾಗಿ 2, 3, 4, 5 ನೇ ಹಂತದ ಮತದಾನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+