ಚುನಾವಣೆಗೂ ಮುನ್ನವೇ ಜಾರ್ಖಂಡ್ ನಲ್ಲಿ ಮೈತ್ರಿ ಮುರಿದುಕೊಂಡ ಬಿಜೆಪಿ
ನವದೆಹಲಿ, ನವೆಂಬರ್ 15: ಜಾರ್ಖಂಡ್ ನಲ್ಲಿ ಇದೇ ತಿಂಗಳಾಂತ್ಯದಿಂದ ಆರಭವಾಗಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ, ಆಲ್ ಝಾರ್ಖಂಡ್ ಸ್ಟೂಡೆಂಟ್ ಯೂನಿಯನ್(ಎಜೆಎಸ್ ಯು) ಪಕ್ಷದೊಂದಿಗಿನ ಮೈತ್ರಿ ಕಡಿದುಕೊಂಡಿದೆ.
ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಷಯದಲ್ಲಿ ಎದ್ದ ಭಿನ್ನಾಭಿಪ್ರಾಯದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬಿಜೆಪಿ ಈಗಾಗಲೇ ತನ್ನ 53 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಎಜೆಎಸ್ ಯು 19 ಸೀಟುಗಳ ಬೇಡಿಕೆ ಇಟ್ಟಿತ್ತು. ಆದರೆ 9 ಕ್ಕಿಂತ ಹೆಚ್ಚು ಸೀಟುಗಳನ್ನು ಕೊಡಲು ಸಾಧ್ಯವೇ ಇಲ್ಲ ಎಂದ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಜಾರ್ಖಂಡ್ ವಿಧಾನಸಭೆಗೆ 5 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ನವೆಂಬರ್ 30 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 7, ಡಿ. 12, ಡಿ. 16, ಡಿ.20 ರಂದು ಕ್ರಮವಾಗಿ 2, 3, 4, 5 ನೇ ಹಂತದ ಮತದಾನ ನಡೆಯಲಿದೆ.
ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವನೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳ್ಲಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿತ್ತು.












Click it and Unblock the Notifications