• search
  • Live TV
ರಾಂಚಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಾರ್ಖಂಡ್: ಜೆಎಂಎಂ ಸಿಎಂ ಅಭ್ಯರ್ಥಿ ಹೇಮಂತ್ ಮುನ್ನಡೆ

|

ರಾಂಚಿ, ಡಿಸೆಂಬರ್ 23: ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಡಿಸೆಂಬರ್ 23ರಂದು 81 ಕ್ಷೇತ್ರಗಳ ಚುನಾವಣೆ ಫಲಿತಾಂಶದ ಆರಂಭಿಕ ಟ್ರೆಂಡ್ ನಲ್ಲಿ ಜೆಎಂಎಂಗೆ ಮುನ್ನಡೆ ಸಿಗುತ್ತಿದ್ದಂತೆ ಈ ಸಂತಸ ದ್ವಿಗುಣವಾಗಿದೆ. ಜೊತೆಗೆ ಜೆಎಂಎಂನ ಸಿಎಂ ಅಭ್ಯರ್ಥಿ ಹೇಮಂತ್ ಸೊರೆನ್ ಮುನ್ನಡೆ ಕಾಯ್ದುಕೊಂಡಿರುವುದು ಖುಷಿ ಹೆಚ್ಚಿಸಿದೆ.

ಜಾರ್ಖಂಡ್ ನಲ್ಲಿ ನವೆಂಬರ್ 30ರಿಂದ ಡಿಸೆಂಬರ್ 20 ರ ತನಕ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆದು, ಡಿಸೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ.

ಜಾರ್ಖಂಡ್ ಚುನಾವಣೋತ್ತರ ಸಮೀಕ್ಷೆ: BJPಗೆ ಸೋಲು, ಕಾಂಗ್ರೆಸ್ ಮೈತ್ರಿಗೆ ಜಯ

ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿವೆ. ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. ಡಿಸೆಂಬರ್ 20ರಂದು ಪ್ರಕಟವಾದ ಪ್ರಮುಖ ಚುನಾವಣೋತ್ತರ ಸಮೀಕ್ಷೆಗಳ ಸರಾಸರಿಯಂತೆ ಜೆಎಂಎಂ -ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಬಂದಿದೆ.

ಫಲಿತಾಂಶ ಟ್ರೆಂಡ್: ಬರ್ಹಾಯಿತ್ ಕ್ಷೇತ್ರದಿಂದ ಸ್ಪರ್ಧಿಸಿರುವ ಹೇಮಂತ್ ಸೊರೆನ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಿಮೋ ಮಾಲ್ಟೋ ವಿರುದ್ಧ ಆರಂಭಿಕ ಮುನ್ನಡೆ(ಶೇ 9ರಷ್ಟು ಮತಗಳ ಅಂತರ) ಕಾಯ್ಡುಕೊಂಡಿದ್ದಾರೆ. ಆದರೆ, ಡುಮ್ಕಾ ಕ್ಷೇತದಲ್ಲಿ ಸಚಿವ ಲೂಯಿಸ್ ಮರಾಂಡಿ ವಿರುದ್ಧ ಸೊರೆನ್ ಹಿನ್ನಡೆ ಅನುಭವಿಸಿದ್ದಾರೆ.

ಒಟ್ಟಾರೆ, 81 ಕ್ಷೇತ್ರಗಳಲ್ಲಿ ಜೆಎಂಎಂ-ಕಾಂಗ್ರೆಸ್- ಆರ್ ಜೆ ಡಿ : 40, ಬಿಜೆಪಿ 29, ಜೆವಿಎಂ 4, ಎಜೆಎಸ್ ಯು 2, ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆಸುಕೊಂಡಿವೆ.

2014ರ ಫಲಿತಾಂಶ: 37 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ಕಾಂಗ್ರೆಸ್ 6 ಸ್ಥಾನ ಹಾಗೂ ಮಿಕ್ಕ 38 ಸ್ಥಾನಗಳನ್ನು ಪ್ರಾದೇಶಿಕ ಪಕ್ಷಗಳು ಗೆಲ್ಲುವಲ್ಲಿ ಸಫಲವಾಗಿದ್ದವು. ವಿಧಾನಸಭೆ 81 ಸ್ಥಾನಗಳನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ 41.

ಈ ಬಾರಿ 81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿವೆ. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ.

English summary
JMM working president Hemant Soren leading over state Welfare (Women & Child Development and Minority Affairs) Minister Lois Marandi after counting of postal ballots in Dumka seat in Jharkhand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X