ಜುಲೈ 31ರ ತನಕ ಲಾಕ್ ಡೌನ್ ವಿಸ್ತರಿಸಿದ ಮತ್ತೊಂದು ರಾಜ್ಯ
ರಾಂಚಿ, ಜೂನ್ 26 : ಜಾರ್ಖಂಡ್ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಇರುವ ಲಾಕ್ ಡೌನ್‌ಅನ್ನು ಜುಲೈ 31ರ ತನಕ ವಿಸ್ತರಣೆ ಮಾಡಲಾಗಿದೆ. ಈಗಾಗಲೇ ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ.
ಶುಕ್ರವಾರ ಜಾರ್ಖಂಡ್ ರಾಜ್ಯ ಸರ್ಕಾರ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2, 261. ಇದುವರೆಗೂ 12 ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿರುವ 5ನೇ ಹಂತದ ಲಾಕ್ ಡೌನ್ (ಅನ್ ಲಾಕ್ 1) ಜೂನ್ 30ರ ತನಕ ದೇಶದಲ್ಲಿ ಜಾರಿಯಲ್ಲಿ ಇರುತ್ತದೆ. ಜಾರ್ಖಂಡ್ ರಾಜ್ಯದಲ್ಲಿ ಜುಲೈ 1ರಿಂದ ಜುಲೈ 31ರ ತನಕ ಲಾಕ್ ಡೌನ್ ಜಾರಿಗೆ ಬರಲಿದೆ.
ಜಾರ್ಖಂಡ್ ಸರ್ಕಾರದ ಆದೇಶದ ಪ್ರಕಾರ ಲಾಕ್ ಡೌನ್ ಜಾರಿಯಲ್ಲಿದ್ದರೂ ಈಗ ನೀಡಿರುವ ವಿನಾಯಿತಿಗಳು ಮುಂದುವರೆಯಲಿದೆ. ರಾತ್ರಿಯ ಕರ್ಫ್ಯೂ ಹಾಗೇಯೇ ಮುಂದುವರೆಯಲಿದೆ.
ಪಶ್ಚಿಮ ಬಂಗಾಳ ಸರ್ಕಾರ ಈಗಾಗಲೇ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ. ದೆಹಲಿ ಸರ್ಕಾರ ಜುಲೈ 31ರ ತನಕ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಹೇಳಿದೆ.












Click it and Unblock the Notifications