Breaking : ವಾಹನ ತಪಾಸಣೆ ವೇಳೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಹತ್ಯೆ
ರಾಂಚಿ, ಜುಲೈ 20: ಹರ್ಯಾಣದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಹೋಗಿ ಹಿರಿಯ ಪೊಲೀಸ್ ಅಧಿಕಾರಿ ಹತ್ಯೆಗೊಳಗಾದ ಘಟನೆ ಇನ್ನು ತನಿಖೆಯಲ್ಲಿರುವಾಗಲೆ ಜಾರ್ಖಂಡ್‌ನಲ್ಲಿ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ.
ಜಾರ್ಖಂಡ್‌ನ ರಾಂಚಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಮೇಲೆ ಆರೋಪಿಗಳು ಪಿಕಪ್ ವ್ಯಾನ್ ಹರಿಸಿದ್ದಾರೆ ಎಂದು ವರದಿಯಾಗಿದೆ. ಸಂಧ್ಯಾ ಟೋಪ್ನೋ ಅವರನ್ನು ತೂಪುದಾನ ಒಪಿಯ ಪ್ರಭಾರಿಯಾಗಿ ನೇಮಿಸಲಾಗಿತ್ತು.
Jharkhand | Sandhya Topno, a female sub-inspector was mowed down to death during a vehicle check, last night. She was posted as in-charge of Tupudana OP. Accused has been arrested and the vehicle has been seized: SSP Ranchi pic.twitter.com/WoNhSK6QTY
— ANI (@ANI) July 20, 2022
ಪಿಕಪ್ ವ್ಯಾನ್ ಅನುಮಾನಾಸ್ಪದ ವಸ್ತುಗಳನ್ನು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತು. ಈ ಬಗ್ಗೆ ಸಬ್ ಇನ್ಸ್‌ಪೆಕ್ಟರ್ ಪಿಕಪ್ ವ್ಯಾನ್ ಅನ್ನು ಚೆಕ್ ಪೋಸ್ಟ್‌ನಲ್ಲಿ ನಿಲ್ಲಿಸಲು ಹೇಳಿದ್ದರು. ಆದರೂ ಪಿಕಪ್ ವ್ಯಾನ್ ನಿಲ್ಲಿಸಿಲ್ಲ.

ಈ ವೇಳೆ ಸಂಧ್ಯಾ ಟಾಪ್ನೋ ಪಿಕಪ್ ವ್ಯಾನ್ ಮುಂದೆ ಬಂದು ಅಡ್ಡ ಹಾಕಿದ್ದಾರೆ. ಚಾಲಕ ವಾಹನ ನಿಲ್ಲಿಸದೇ ಆಕೆಯ ಮೇಲೆಯೇ ವ್ಯಾನ್ ಹರಿಸಿದ್ದಾರೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ರಾಂಚಿ ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ. ಪೊಲೀಸರು ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮೃತ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ 2018ರ ಬ್ಯಾಚ್‌ನ ಕಾನ್‌ಸ್ಟೆಬಲ್. ಮೂಲಗಳ ಪ್ರಕಾರ, ಚೆಕ್ ಪೋಸ್ಟ್‌ನಲ್ಲಿ ಯಾವುದೇ ಬ್ಯಾರಿಕೇಡ್‌ಗಳಿಲ್ಲ. ಹೀಗಾಗಿ ಸಂಧ್ಯಾ ಟಾಪ್ನೋ ತನ್ನ ವಾಹನದಿಂದ ಇಳಿದು ಅನುಮಾನಾಸ್ಪದ ಪಿಕಪ್ ವ್ಯಾ ನ್‌ಗೆ ಅಡ್ಡ ನಿಂತು ಅದನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.
ಮಂಗಳವಾರ (ಜುಲೈ 19 ) ಹರ್ಯಾಣದ ನುಹ್‌ನಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾವನ್ನು ತಡೆಯಲು ಹೋಗಿದ್ದ ಡಿಎಸ್‌ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರ ಮೇಲೆ ಆರೋಪಿಗಳು ಲಾರಿ ಹರಿಸಿ ಕೊಲೆ ಮಾಡಿದ್ದರು. ಡಿಎಸ್‌ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಸ್ಥಳಕ್ಕೆ ಭೇಟಿ ನೀಡಿದ್ದರು.
Recommended Video
ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಆರೋಪಿಗಳ ದಾರಿಯಲ್ಲಿ ಅಡ್ಡ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಲಾರಿ ಚಾಲಕ ಅಧಿಕಾರಿ ಮೇಲೆಯೇ ಲಾರಿ ಹರಿಸಿ ಹತ್ಯೆ ಮಾಡಿದ್ದರು. ಪೊಲೀಸ್ ಅಧಿಕಾರಿ ಕುಟುಂಬಕ್ಕೆ ಸರ್ಕಾರ 1 ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಓರ್ವ ವ್ಯಕ್ತಿಗೆ ಸರಕಾರಿ ಉದ್ಯೋಗ ಘೋಷಿಸಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications