ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಇಷ್ಟೇ ಶುಲ್ಕ ಫಿಕ್ಸ್!

|
Google Oneindia Kannada News

ರಾಂಚಿ, ಆಗಸ್ಟ್.27: ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚದ ಬಗ್ಗೆ ಜಾರ್ಖಂಡ್ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಶುಲ್ಕವನ್ನು ನಿಗದಿಗೊಳಿಸಿ ಆದೇಶಿಸಿದೆ.

Recommended Video

Coronaದಿಂದ ಗುಣಮುಖರಾದ SP Balasubrahmanyam . ಈಗ ಪ್ರಜ್ಞಾಸ್ತಿಥಿಗೆ ಮರಳಿದ್ದಾರೆ | Oneindia Kannada

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ಅತಿಹೆಚ್ಚು ಶುಲ್ಕ ವಿಧಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆ ನೀಡುವುದಕ್ಕೆ ಇಂತಿಷ್ಟು ಶುಲ್ಕ ವಿಧಿಸುವಂತೆ ಆದೇಶಿಸಿದೆ.

ಕೊರೊನಾವೈರಸ್ ಸೋಂಕಿತರ ಚಿಕಿತ್ಸಾ ವೆಚ್ಚ ಹೆಚ್ಚಾಗುವುದರ ಹಿಂದಿನ ರಹಸ್ಯ?ಕೊರೊನಾವೈರಸ್ ಸೋಂಕಿತರ ಚಿಕಿತ್ಸಾ ವೆಚ್ಚ ಹೆಚ್ಚಾಗುವುದರ ಹಿಂದಿನ ರಹಸ್ಯ?

ಕೊರೊನಾವೈರಸ್ ಸೋಂಕಿತರಿಗೆ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶಿಸ್ತುಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಶಿಸ್ತುಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಬನ್ನಾ ಗುಪ್ತಾ ತಿಳಿಸಿದ್ದಾರೆ.

ಆಸ್ಪತ್ರೆಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಣೆ

ಆಸ್ಪತ್ರೆಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಣೆ

ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕೆ ಖಾಸಗಿ ಆಸ್ಪತ್ರೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಅನುಮತಿ ಪಡೆದ ಆಸ್ಪತ್ರೆ ಮತ್ತು ಮಾನ್ಯತೆ ಪಡೆಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಶುಲ್ಕವನ್ನು ನಿಗದಿಗೊಳಿಸಲಾಗಿದೆ. ರಾಜ್ಯದಲ್ಲಿನ ಜಿಲ್ಲೆಗಳನ್ನು ಎ, ಬಿ, ಸಿ ಎಂದು ಮೂರು ರೀತಿಯಾಗಿ ವಿಭಾಗಿಸಲಾಗಿದೆ.

ಉನ್ನತ ಶ್ರೇಣಿ ಜಿಲ್ಲೆಗಳಲ್ಲಿ ಕೊವಿಡ್-19 ಚಿಕಿತ್ಸಾ ಶುಲ್ಕ

ಉನ್ನತ ಶ್ರೇಣಿ ಜಿಲ್ಲೆಗಳಲ್ಲಿ ಕೊವಿಡ್-19 ಚಿಕಿತ್ಸಾ ಶುಲ್ಕ

ಜಾರ್ಖಂಡ್ ನಲ್ಲಿ ಎ ವಿಭಾಗಕ್ಕೆ ಸೇರಿದ ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿತರ ಚಿಕಿತ್ಸಾ ಶುಲ್ಕವನ್ನು ಸರ್ಕಾರವೇ ತೀರ್ಮಾನಿಸಿದೆ. ಸರ್ಕಾರದ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 6000 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 10,000 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 18000 ರೂಪಾಯಿ ದರ ನಿಗದಿಗೊಳಿಸಲಾಗಿದೆ. ಮಾನ್ಯತೆ ಪಡೆಯದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 5500 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 8000 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 15000 ರೂಪಾಯಿ ದರ ನಿಗದಿಗೊಳಿಸಲಾಗಿದೆ.

ಬಿ ವಿಭಾಗದ ಜಿಲ್ಲೆಗಳಲ್ಲಿ ಕೊವಿಡ್-19 ಚಿಕಿತ್ಸೆ

ಬಿ ವಿಭಾಗದ ಜಿಲ್ಲೆಗಳಲ್ಲಿ ಕೊವಿಡ್-19 ಚಿಕಿತ್ಸೆ

ಜಾರ್ಖಂಡ್ ನಲ್ಲಿ ಬಿ ವಿಭಾಗಕ್ಕೆ ಸೇರಿದ ಜಿಲ್ಲೆಯಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸಾ ಶುಲ್ಕವನ್ನು ಸರ್ಕಾರ ನಿಗದಿಗೊಳಿಸಿದೆ. ಸರ್ಕಾರದ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 5500 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 8000 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 14400 ರೂಪಾಯಿ ದರ ನಿಗದಿಗೊಳಿಸಲಾಗಿದೆ. ಮಾನ್ಯತೆ ಪಡೆಯದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 5000 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 6400 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 10800 ರೂಪಾಯಿ ದರ ನಿಗದಿಗೊಳಿಸಲಾಗಿದೆ.

ಸಿ ವಿಭಾಗದ ಜಿಲ್ಲೆಗಳಲ್ಲಿ ಕೊರೊನಾವೈರಸ್ ಚಿಕಿತ್ಸೆ

ಸಿ ವಿಭಾಗದ ಜಿಲ್ಲೆಗಳಲ್ಲಿ ಕೊರೊನಾವೈರಸ್ ಚಿಕಿತ್ಸೆ

ಇನ್ನು, ಸಿ ವಿಭಾಗಕ್ಕೆ ಸೇರಿದ ಜಿಲ್ಲೆಯಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸಾ ಶುಲ್ಕವನ್ನು ಸರ್ಕಾರ ನಿಗದಿಗೊಳಿಸಿದೆ. ಸರ್ಕಾರದ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 5000 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 6000 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 10400 ರೂಪಾಯಿ ದರ ನಿಗದಿಗೊಳಿಸಲಾಗಿದೆ. ಮಾನ್ಯತೆ ಪಡೆಯದ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಲಕ್ಷಣಗಳಿಲ್ಲದ ವ್ಯಕ್ತಿಗಳ ಚಿಕಿತ್ಸೆಗೆ 4000 ರೂಪಾಯಿ, ಆಕ್ಸಿಜನ್ ಸಹಿತ ಐಸೋಲೇಷನ್ ವಾರ್ಡ್ ಚಿಕಿತ್ಸೆಗೆ 4800 ರೂಪಾಯಿ, ವೆಂಟಿಲೇಟರ್ ಸಹಿತ ಐಸಿಯುನಲ್ಲಿ ಚಿಕಿತ್ಸೆಗೆ 9000 ರೂಪಾಯಿ ದರ ನಿಗದಿಗೊಳಿಸಲಾಗಿದೆ.

English summary
Jharkhand Govt Fixes Fee For Private Hospitals For Treating Coronavirus Patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X