ಜಾರ್ಖಂಡ್ ಮಾಜಿ ಸಚಿವರಿಗೆ 7 ವರ್ಷ ಜೈಲು ಶಿಕ್ಷೆ: ಪ್ರಕರಣ ಏನು?

ರಾಂಛಿ, ಏಪ್ರಿಲ್ 23: ಜಾಖಂಡ್‌ನ ಮಾಜಿ ಸಚಿವ ಅನೋಶ್ ಎಕ್ಕಾ ಅವರಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ರಾಂಚಿ ನ್ಯಾಯಾಲಯ ತೀರ್ಪು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಪಿಎಂಎಲ್‌ಎ ವಿಶೇಷ ನ್ಯಾಯಾಧೀಶ ಅನಿಲ್ ಕುಮಾರ್ ಮಿಶ್ರಾ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದಾರೆ.

ಪ್ರಕರಣದಲ್ಲಿ ಅನೋಶ್ ಎಕ್ಕಾ ದೋಷಿ ಎಂದು ಕಳೆದ ಮಾರ್ಚ್ 21 ರಂದು ಜಾರ್ಖಂಡ್ ನ್ಯಾಯಾಲಯ ಹೇಳಿತ್ತು. ಇದೀಗ ಜೈಲು ಶಿಕ್ಷೆಯ ಜೊತೆಗೆ 2 ಕೋಟಿ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ.

Jharkhand Former Minister Sentenced To 7 Years Rigorous Imprisonment

ಹಗರಣದ ತನಿಖೆ ಆರಂಭಿಸಿದ ಜಾರಿ ನಿರ್ದೇಶನಾಲಯ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕೋಡಾ ಸಂಪುಟದಲ್ಲಿ ಎಕ್ಕಾ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+