ಜಾರ್ಖಂಡ್ ಸರ್ಕಾರದಲ್ಲಿ ಭಿನ್ನಮತ ಸ್ಫೋಟ: ಬೆಂಬಲ ವಾಪಸ್ ಪಡೆದ ಜೆವಿಎಂ
ರಾಂಚಿ, ಜನವರಿ 25: ಸರ್ಕಾರ ರಚನೆಯಾದ ಒಂದು ತಿಂಗಳೊಳಗೇ ಜಾರ್ಖಂಡ್‌ನ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಉಂಟಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಜಾರ್ಖಂಡ್ ವಿಕಾಸ್ ಮೋರ್ಚಾ ಪ್ರಜಾತಾಂತ್ರಿಕ (ಜೆವಿಎಂ) ಹಿಂಪಡೆದುಕೊಂಡಿದೆ. ಕಾಂಗ್ರೆಸ್ ತನ್ನ ಶಾಸಕರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅದು ಆರೋಪಿಸಿದೆ.
ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಮುಖ್ಯಸ್ಥ ಹೇಮಂತ್ ಸೊರೆನ್ ಅವರಿಗೆ ಪತ್ರ ಬರೆದಿರುವ ಜೆವಿಎಂ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಆಡಳಿತಾರೂಢ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ತಮ್ಮ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಜೆವಿಎಂನ ಇಬ್ಬರು ಶಾಸಕರಾದ ಪ್ರದೀಪ್ ಯಾದವ್ ಮತ್ತು ಬಂಧು ತಿರ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಹೆಚ್ಚಿಸಿತ್ತು. ಅದರ ಮರುದಿನವೇ ಈ ಪ್ರಕಟಣೆ ಹೊರಡಿಸಲಾಗಿದೆ. ಈ ಶಾಸಕರು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಜಾರ್ಖಂಡ್ ಉಸ್ತುವಾರಿ ಆರ್‌ಪಿಎನ್ ಸಿಂಗ್ ಅವರನ್ನ ಕೂಡ ಭೇಟಿ ಮಾಡಿದ್ದರು.

ಬೆಂಬಲ ವಾಪಸ್
'ನಮ್ಮ ಪಕ್ಷವಾದ ಜಾರ್ಖಂಡ್ ವಿಕಾಸ್ ಮೋರ್ಚಾ (ಪ್ರಜಾತಾಂತ್ರಿಕ) 2019ರ ಡಿ. 24ರಂದು ನಿಮ್ಮ (ಹೇಮಂತ್ ಸೊರೆನ್) ನಾಯಕತ್ವದ ಸರ್ಕಾರಕ್ಕೆ ಷರತ್ತುರಹಿತ ಬೆಂಬಲ ನೀಡುವ ಪತ್ರವನ್ನು ಸಲ್ಲಿಸಿತ್ತು. ಆದರೆ ಯುಪಿಎ ಮೈತ್ರಿಕೂಟದ ಭಾಗವಾದ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಅದರ ಕುರಿತು ಇಂದಿನ ಪ್ರತಿಷ್ಠಿತ ಪತ್ರಿಕೆಯಲ್ಲಿ ವರದಿಯಾಗಿದೆ. ಹೀಗಾಗಿ ನಮ್ಮ ಪಕ್ಷ ತನ್ನ ಬೆಂಬಲವನ್ನು ಪರಾಮರ್ಶಿಸಿದೆ ಹಾಗೂ ನಿಮ್ಮ ನಾಯಕತ್ವದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದುಕೊಳ್ಳುತ್ತಿದೆ' ಎಂದು ಪತ್ರದಲ್ಲಿ ಹೇಳಿದ್ದಾರೆ.

ಒಬ್ಬರೇ ಶಾಸಕರು ಉಳಿಯುವುದು
ಇತ್ತೀಚೆಗೆ ನಡೆದ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಜೆವಿಎಂನ ಮೂರು ಮಂದಿ ಜಯಗಳಿಸಿದ್ದರು. ಯಾದವ್ ಮತ್ತು ತಿರ್ಕೆ ಕಾಂಗ್ರೆಸ್ ಸೇರ್ಪಡೆಗೊಂಡರೆ ಮರಾಂಡಿ ರಾಜ್ಯದಲ್ಲಿ ಜೆವಿಎಂನ ಏಕೈಕ ಶಾಸಕರಾಗಿ ಉಳಿಯಲಿದ್ದಾರೆ.

ಸಿಎಲ್‌ಪಿ ಸ್ಥಾನದಿಂದ ವಜಾ
ಹಾಗೆಯೇ ರಾಜ್ಯದಲ್ಲಿ ಪ್ರಮುಖ ವಿರೋಧಪಕ್ಷವಾಗಿರುವ ಬಿಜೆಪಿ ಜತೆ ಜೆವಿಎಂ ವಿಲೀನಗೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಆದರೆ ಇದನ್ನು ಜೆವಿಎಂ ನಿರಾಕರಿಸಿದೆ. ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಪ್ರದೀಪ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಕಿತ್ತುಹಾಕಲು ಪಕ್ಷ ನಿರ್ಧರಿಸಿದೆ.

ಸರ್ಕಾರ ನಿರಾತಂಕ
ಆದರೆ ಜೆವಿಎಂ ತನ್ನ ಬೆಂಬಲ ಹಿಂದಕ್ಕೆ ಪಡೆದುಕೊಂಡರೂ ಹೇಮಂತ್ ಸೊರೆನ್ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ. 81 ಸದಸ್ಯರ ಸದನದಲ್ಲಿ ಸರ್ಕಾರ 47 ಶಾಸಕರ ಬಲ ಹೊಂದಿದೆ. 25 ಸದಸ್ಯರನ್ನು ಹೊಂದಿರುವ ಬಿಜೆಪಿ, ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಇನ್ನೂ ಘೋಷಿಸಿಲ್ಲ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications