ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಂಗ್ಲಾದಿಂದ ರೆಮ್‌ಡೆಸಿವಿರ್ ಲಸಿಕೆ ಆಮದಿಗೆ ಕೇಂದ್ರದ ಅನುಮತಿ ಕೇಳಿದ ಜಾರ್ಖಂಡ್

|
Google Oneindia Kannada News

ರಾಂಚಿ, ಏಪ್ರಿಲ್ 19: ಬಾಂಗ್ಲಾದೇಶದಿಂದ ರೆಮ್‌ಡೆಸಿವಿರ್ ಕೊರೊನಾ ಲಸಿಕೆ ತರಿಸಿಕೊಳ್ಳಲು ಜಾರ್ಖಂಡ್ ಕೇಂದ್ರ ಸರ್ಕಾರದ ಅನುಮತಿ ಕೇಳಿದೆ.

ಕೋವಿಡ್‌ನಿಂದ ತೀವ್ರತರದಲ್ಲಿ ಬಳಲುತ್ತಿರುವ ರೋಗಿಗಳಿಗೆ ರೆಮ್‌ಡೆಸಿವಿರ್ ಲಸಿಕೆ ನೀಡಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಹೇಮಂತ್ ಸೋರೆನ್ ಭಾನುವಾರ ಟ್ವೀಟ್ ಮಾಡಿದ್ದಾರೆ. ಬಾಂಗ್ಲಾದೇಶದಿಂದ ಲಸಿಕೆ ತರಿಸಿಕೊಳ್ಳುವುದಾಗಿ ಮಾಹಿತಿ ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ, ಕ್ರಿಟಿಕಲ್ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ನೀಡಲಾಗುತ್ತಿದ್ದು, ದೇಶದಲ್ಲಿ ಲಸಿಕೆಯ ಕೊರತೆ ಇದೆ ಹೀಗಾಗಿ ತುರ್ತು ಸಂದರ್ಭಗಳಲ್ಲಿ ಬಳಕೆಗಾಗಿ 50 ಸಾವಿರ ಲಸಿಕೆಗಳನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

vaccine

ಈ ಕುರಿತು ಕೇಂದ್ರ ಸಚಿವ ಸದಾನಂದಗೌಡ ಅವರಿಗೆ ಪತ್ರ ಬರೆದಿದ್ದು, ತಕ್ಷಣವೇ ಅನುಮತಿ ನೀಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರುಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಕೊರೊನಾ ಲಸಿಕೆ ಆಮದನ್ನು ಕೇಂದ್ರ ನಿಷೇಧಿಸಿದೆ,ದೇಶದಲ್ಲಿ ಕೊರೊನಾ ಪರಿಸ್ಥಿತಿ ಸ್ಥಿರವಾಗುವವರೆಗೂ ಲಸಿಕೆ ಆಮದು ಮಾಡಿಕೊಳ್ಳುವುದಿಲ್ಲ ಎಂದು ಹೇಳಲಾಗಿತ್ತು.

7 ಭಾರತೀಯ ಕಂಪನಿಗಳು ರೆಮ್‌ಡೆಸಿವಿರ್ ಲಸಿಕೆಯನ್ನು ಉತ್ಪಾದಿಸುತ್ತಿವೆ, 38.80 ಲಕ್ಷ ಯುನಿಟ್‌ನಷ್ಟು ಲಸಿಕೆಗಳನ್ನು ಉತ್ಪಾದಿಸಲಾಗುತ್ತಿದೆ. ಭಾರತದಲ್ಲಿ 2,61,500 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹಾಗೆಯೇ 1501 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 2.61

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 15,66,394 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 26,65,38,416ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಅಂತೆಯೇ ಈ ವರೆಗೂ 12,26,22,590 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ದೇಶಾದ್ಯಂತ 2,34,692 ಕೇಸ್ ಗಳು ಪತ್ತೆಯಾಗಿತ್ತು. ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿತ್ತು.

ಆದರೆ ಇಂದು ಈ ದಾಖಲೆಯನ್ನೂ ಮೀರಿಸುವಂತೆ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದೆ. ಆ ಮೂಲಕ ಸತತ 4ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.

English summary
The Jharkhand government has reached out to some pharma companies in Bangladesh for importing the antiviral drug Remdesivir, which is used in the treatment of serious Covid patients, Chief Minister Hemant Soren tweeted on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X