ಬಿಗಡಾಯಿಸಿದ ಲಾಲೂ ಪ್ರಸಾದ್ ಆರೋಗ್ಯ, ಹತೋಟಿಗೆ ಬರುತ್ತಿಲ್ಲ ಮಧುಮೇಹ

ರಾಂಚಿ, ನವೆಂಬರ್ 19: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಬಿಗಡಾಯಿಸಿದೆ.

ಅವರ ಕಾಲಿನ ಮೇಲೆ ಎದ್ದಿರುವ ಕುರು ಉಲ್ಬಣಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಾರ್ಖಂಡದ ರಾಂಚಿಯ ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(RIMS) ವೈದ್ಯರು ತಿಳಿಸಿದ್ದಾರೆ.

ಲಾಲೂ ಪ್ರಸಾದ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಅದನ್ನು ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲ. ರಕ್ತದೊತ್ತಡವೂ ಹೆಚ್ಚಾಗಿದೆ. ಈ ಕಾರಣದಿಂದ ಕಾಲಿನ ಮೇಲೆ ಎದ್ದಿರುವ ಕುರುವೂ ಉಲ್ಬಣಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

Lalu Prasad Yadavas health worsening, says RIMS Doctor

ಬಹುಕೋಟಿ ಮೇವು ಹಗರಣದ ನಾಲ್ಕು ಆರೋಪಗಳಲ್ಲಿ ದೋಷಿಯಾಗಿರುವ ಲಾಲೂ ರಾಂಚಿಯ ಬಿಸ್ರಾ ಮುಂಡಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+