ಜಾರ್ಖಂಡ್ ನ್ಯಾಯಾಧೀಶರ ಸಾವು: ಅಪಘಾತವಲ್ಲ ಕೊಲೆ
ರಾಂಛಿ, ಜುಲೈ 29: ಜಾರ್ಖಂಡ್‌ನ ನ್ಯಾಯಾಧೀಶರ ಸಾವು ಸಹಜ ಅಪಘಾತದಿಂದ ಸಂಭವಿಸಿದ್ದಲ್ಲ ಅದೊಂದು ಕೊಲೆ ಎಂಬುದು ತಿಳಿದುಬಂದಿದೆ.
ಜುಲೈ 28ರ ಬೆಳಗ್ಗೆ ರಸ್ತೆ ಸಮೀಪದಲ್ಲಿ ವಾಕಿಂಗ್ ಮಾಡುತ್ತಿದ್ದ ಜಾರ್ಖಂಡ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಬಂದ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಆದರೆ ಇದೊಂದು ಆಕಸ್ಮಿಕ ಘಟನೆಯಲ್ಲ, ಇದು ಉದ್ದೇಶಪೂರ್ವಕವಾಗಿ ನಡೆದ ಕೊಲೆಯಂತೆ ಕಾಣುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಬೆಳಗಿನ ಜಾವ 1 ಗಂಟೆ ಸುಮಾರಿಗೆ ತನ್ನ ವಾಹನವನ್ನು ಕಳವು ಮಾಡಲಾಗಿದೆ ಎಂದು ಧನ್ಬಾದ್‌ನ ಮಹಿಳೆಯೊಬ್ಬರು ದೂರು ನೀಡಿದ್ದು, ಆಟೋ ಆ ಮಹಿಳೆಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತ ಬಗ್ಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಡಿಐಜಿ ಮಯೂರ್ ಪಟೇಲ್ ಕನ್ಹಯ್ಯಲಾಲ್ ಅವರು ಹೇಳಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ವಿವಿಧ ಪೊಲೀಸ್ ತಂಡಗಳನ್ನು ರಚಿಸಲಾಗಿದೆ" ಎಂದು ಅವರು ತಿಳಿಸಿದರು.
ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಘಟನೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಆಟೋ ಚಾಲಕ ಉದ್ದೇಶಪೂರ್ವಕವಾಗಿ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಆಟೋ ಹರಿಸಿದಂತೆ ತೋರುತ್ತದೆ.
ಧನ್ಬಾದ್‌ನ ಸೆಷನ್ಸ್ ನ್ಯಾಯಾಧೀಶರು ಗಾಲ್ಫ್ ಮೈದಾನದ ಬಳಿಯ ನಿರ್ಜನ ರಸ್ತೆಯಲ್ಲಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನ್ಯಾಯಾಧೀಶರು ಹಿರಾಪುರದ ಜೂಡ್ ಕಾಲೋನಿಯಲ್ಲಿರುವ ತಮ್ಮ ಮನೆಯಿಂದ 500 ಮೀಟರ್‌ಗಿಂತಲೂ ಕಡಿಮೆ ದೂರದಲ್ಲಿ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಹಾಗೂ ಆತನ ಜತೆಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications