ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

65 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ: ರಘುವರ್ ದಾಸ್ ವಿಶ್ವಾಸ

|
Google Oneindia Kannada News

ರಾಂಚಿ, ನವೆಂಬರ್ 02: ಈ ತಿಂಗಳಾಂತ್ಯದಿಂದ ಆರಂಭವಾಗಲಿರುವ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ 65 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹಾಲಿ ಮುಖ್ಯಮಂತ್ರಿ ರಘುವರ್ ದಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್ ರಾಜ್ಯದಲ್ಲಿ ಬಿಜೆಪಿ ಮಾಡಿದ ಅತ್ಯುತ್ತಮ ಕೆಲಸ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಿಂದಾಗಿ ಜಾರ್ಖಂಡ್ ನಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆ ಘೋಷಣೆ, ಡಿ. 23ಕ್ಕೆ ಫಲಿತಾಂಶಜಾರ್ಖಂಡ್ ವಿಧಾನಸಭಾ ಚುನಾವಣೆ ಘೋಷಣೆ, ಡಿ. 23ಕ್ಕೆ ಫಲಿತಾಂಶ

ಡಿಸೆಂಬರ್ ನಲ್ಲಿ ಜಾರ್ಖಂಡ್ ವಿಧಾನಸಭೆಯ ಕಾಲಾವಧಿ ಅಂತ್ಯಗೊಳ್ಳಲಿದ್ದು, ಶುಕ್ರವಾರ ಚುನಾವಣಾ ಆಯೋಗ ಚುನಾವಣೆಯ ದಿನಾಂಕ ಘೋಷಿಸಿತ್ತು.

Raghuvar Das, Jharkhand CM Confident Of Winning 65 Seats

5 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ನವೆಂಬರ್ 30 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 7, ಡಿ. 12, ಡಿ. 16, ಡಿ.20 ರಂದು ಕ್ರಮವಾಗಿ 2, 3, 4, 5 ನೇ ಹಂತದ ಮತದಾನ ನಡೆಯಲಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣೆ: ಇಂದು ದಿನಾಂಕ ಘೋಷಣೆಜಾರ್ಖಂಡ್ ವಿಧಾನಸಭೆ ಚುನಾವಣೆ: ಇಂದು ದಿನಾಂಕ ಘೋಷಣೆ

ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವನೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳ್ಲಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದರು.

English summary
Raghuvar Das, Jharkhand CM Confident Of Winning 65 Seats,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X