ಲಾಲು ಪ್ರಸಾದ್ ಆರೋಗ್ಯ ಮತ್ತಷ್ಟು ಗಂಭೀರ: ರಾಂಚಿಯಿಂದ ದೆಹಲಿಗೆ ಏರ್ಲಿಫ್ಟ್
ರಾಂಚಿ, ಜನವರಿ 23: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಏರ್ಲಿಫ್ಟ್ ಮಾಡುವ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ.
ಲಾಲು ಪ್ರಸಾದ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರನ್ನು ಶನಿವಾರ ಸಂಜೆ 5.30ರ ವೇಳೆಗೆ ರಾಂಚಿಯ ರಿಮ್ಸ್ ಆಸ್ಪತ್ರೆಯಿಂದ ಕಾರ್ಡಿಯಾಕ್ ಆಂಬುಲೆನ್ಸ್ನಲ್ಲಿ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ಜತೆಗೆ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಯಿತು. ಆಂಬುಲೆನ್ಸ್ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ತಲುಪುವಂತೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ರಾಂಚಿ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಸಾಗಿಸಲಾಯಿತು.
ಲಾಲು ಪ್ರಸಾದ್ ಅವರ ಮದುಮೇಹ ಮಟ್ಟ ತೀವ್ರ ಏರಿಕೆಯಾಗಿದ್ದು, ಅವರ ಮೂತ್ರಪಿಂಡಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಅವರ ಶ್ವಾಸಕೋಶದಲ್ಲಿಯೂ ಸಮಸ್ಯೆಯಾಗಿದ್ದು, ನೀರು ತುಂಬಿಕೊಂಡಿದೆ. ಇದರಿಂದ ಅವರಲ್ಲಿ ನ್ಯುಮೋನಿಯಾ ಕಾಣಿಸಿಕೊಂಡಿದ್ದು, 72ನೇ ವಯಸ್ಸಿನಲ್ಲಿ ಇದು ತೀವ್ರ ಅಪಾಯಕಾರಿಯಾಗಿದೆ.

ಶುಕ್ರವಾರ ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಿದ ಅವರ ಮಗ ತೇಜಸ್ವಿ ಯಾದವ್, 'ಅವರಿಗೆ ಉತ್ತಮ ಚಿಕಿತ್ಸೆ ನೀಡಲು ನಮ್ಮ ಕುಟುಂಬ ಬಯಸಿದೆ. ಆದರೆ ಅವರಿಗೆ ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂದು ವಿಶ್ಲೇಷಣೆ ನಡೆಸುವುದು ವೈದ್ಯರಿಗೆ ಬಿಟ್ಟಿದ್ದು. ಅವರ ಎಲ್ಲ ಪರೀಕ್ಷೆಯ ವರದಿಗಳು ಬಂದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನಾನು ನಾಳೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ' ಎಂದು ತಿಳಿಸಿದ್ದಾರೆ.
-
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?












Click it and Unblock the Notifications