ಪಿಟಿಐ ಬ್ಯೂರೋ ಮುಖ್ಯಸ್ಥ ಖಿನ್ನತೆಗೊಳಗಾಗಿ ಆತ್ಮಹತ್ಯೆ

ರಾಂಚಿ, ಆ 13: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ(ಪಿಟಿಐ)ನ ರಾಂಚಿ ಬ್ಯೂರೋ ಮುಖ್ಯಸ್ಥರಾಗಿದ್ದ ಪಿವಿ ರಾಮಾನುಜಂ ಅವರು ನಿಧನರಾಗಿದ್ದಾರೆ. ಗುರುವಾರದಂದು ನೇಣುಬಿಗಿದ ಸ್ಥಿತಿಯಲ್ಲಿ ಅವರ ಆಫೀಸ್ ಕಮ್ ಮನೆಯಲ್ಲಿ ಶವ ಪತ್ತೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ತಮ್ಮ ಪತ್ನಿಯ ಜೊತೆ ಮಾತನಾಡುತ್ತಿದ್ದರು. ಮಾನಸಿಕ ಖಿನ್ನತೆ, ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಂಚಿ ಎಸ್ ಪಿ ನೌಷಾದ್ ಆಲಂ ಹೇಳಿದ್ದಾರೆ.

ಮನೆಯಲ್ಲಿದ್ದ ಬೆಡ್ ಶೀಟ್ ಬಳಸಿಕೊಂಡು ನೇಣು ಹಾಕಿಕೊಂಡಿದ್ದಾರೆ. ಪಿವಿ ರಾಮಾನುಜಂಗೆ 55 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಟಕ್, ದೆಹಲಿ ಹಾಗೂ ರಾಂಚಿಯಲ್ಲಿ ಕಳೆದ 35 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದರು.

Senior PTI journalist in Ranchi found dead

ರಾಮಾನುಜಂ ಅವರ ನಿಧನಕ್ಕೆ ಸಿಎಂ ಹೇಮಂತ್ ಸೊರೆನ್, ಕೇಂದ್ರ ಸಚಿವ ಅರ್ಜುನ್ ಮುಂಡಾ ಮುಂತಾದವರು ಸಂತಾಪ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖಾ ತಂಡ( ಎಸ್ಐಟಿ) ವನ್ನು ರಚಿಸಲಾಗಿದ್ದು, ಈ ಪ್ರಕರಣವನ್ನು ತನಿಖೆ ನಡೆಸಲಾಗುವುದು ಎಂದು ಡಿಐಜಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+