ಶೀಘ್ರದಲ್ಲೇ 11 ಸಾವಿರ ಪೊಲೀಸ್ ವಸತಿಗೃಹ ನಿರ್ಮಾಣ: ರಾಮಲಿಂಗಾರೆಡ್ಡಿ

Posted By: ಶಿವಮೊಗ್ಗ ಪ್ರತಿನಿಧಿ
Subscribe to Oneindia Kannada

ಶಿವಮೊಗ್ಗ, ಜನವರಿ 06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ 11 ಸಾವಿರ ಪೊಲೀಸ್ ವಸತಿಗೃಹಗಳನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಶಿವಮೊಗ್ಗದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 240 ಪೊಲೀಸ್ ಸಿಬ್ಬಂದಿಗಳು ಹಾಗೂ 10 ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 250 ಪೊಲೀಸ್ ವಸತಿಗೃಹವನ್ನು 45.20ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ ಎಂದು ಹೇಳಿದರು.

ಪೊಲೀಸ್ ಇಲಾಖೆ ಆದುನೀಕರಣ ಯೋಜನೆ ಅಡಿಯಲ್ಲಿ ಶಿವಮೊಗ್ಗದಲ್ಲಿ ನೂತನವಾಗಿ ಕೋಟೆ ಪೊಲೀಸ್ ಠಾಣೆಯನ್ನು 1.57 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸದ್ಯದಲ್ಲೇ ಪೊಲೀಸ್ ವಸತಿಗೃಹವನ್ನು ನಿರ್ಮಿಸಲಾಗುತ್ತದೆ ಎಂದು ಭರವಸೆ ನೀಡಿದರು.

11,000 police quarters construction complete soon

ಕೇಂದ್ರ ಕಾರಾಗೃಹ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ನಂತರ ಹಳೆಯ ಜೈಲು ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಲಾಗುತ್ತದೆ. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೂಕ್ತ ಸ್ಥಳ ಇಲ್ಲದಿರುವ ಕಾರಣ ಇದೀಗ ಈಗಿರುವ ಹಳೆಯ ಜೈಲು ಜಾಗ ಇಲಾಖೆಗೆ ಅವಶ್ಯಕತೆ ಇಲ್ಲದಿದ್ದರೆ ಅದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಬಿಟ್ಟುಕೊಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದರು.

ಶಿವಮೊಗ್ಗಕ್ಕೆ ಕಮಿಷನರೇಟ್ ನೀಡುವ ಕುರಿತ ಸಾದಕ ಭಾದಕ, ಮಾನದಂಡ ಪರಿಶೀಲಿಸಿ ನಂತರವಷ್ಟೇ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯನ್ನು ಆಧುನೀಕರಣಗೊಳಿಸಲು ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚಿನ ಗಮನ ಹರಿಸಲಾಗಿದೆ.

11,000 police quarters construction complete soon

2500ಕ್ಕೂ ಹೆಚ್ಚು ಮನೆಗಳು ಪೂರ್ಣಗೊಂಡಿವೆ.4,500 ಮನೆಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. 4,000 ಮನೆಗಳ ನನಿರ್ಮಾಣ ಕಾಮಗಾರಿಗೆ ಆದೇಶ ನೀಡಲಾಗಿದೆ. ವಸತಿಗೃಹಗಳ ನಿರ್ಮಾಣಕ್ಕೆ2,223 ಕೋಟಿ ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Home minister Ramalinga Reddy said that the government has planning to construct 11,000 houses for police personnel and 2,500 houses already been constructed in various places in the state.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ