ಶಿವಮೊಗ್ಗ : ರ‍್ಯಾಗಿಂಗ್‌ಗೆ ನೊಂದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Posted By: Gururaj
Subscribe to Oneindia Kannada

ಶಿವಮೊಗ್ಗ, ಅಕ್ಟೋಬರ್ 23 : ಶಿವಮೊಗ್ಗ ವೈದ್ಯಕೀಯ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ರಾಘು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದೀಪಾವಳಿ ಮುಗಿಸಿಕೊಂಡು ಭಾನುವಾರ ಸಂಜೆ ಶಿವಮೊಗ್ಗಕ್ಕೆ ಬಂದಿದ್ದ ರಾಘು, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚುಡಾಯಿಸಿದ್ರೆ ಹುಷಾರ್... ಜೈಲಿಗೆ ಹೋಗೋದು ಪಕ್ಕಾ..!

1st year medical student commits suicide, parents allege ragging

ಹಾಸ್ಟೆಲ್‍ ಕೊಠಡಿಯಲ್ಲಿ ನೇಣಿಗೆ ಶರಣಾದ ರಾಘು ಮೃತದೇಹವನ್ನು ಹಿರಿಯ ವಿದ್ಯಾರ್ಥಿಗಳು ಇಳಿಸಿ, ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದರು. ಪೊಲೀಸರು ಬರುವ ಮುನ್ನವೇ ನೇಣು ಹಾಕಿಕೊಂಡಿದ್ದ ದೇಹವನ್ನು ಕೆಳಗಿಳಿಸಿ, ಆಸ್ಪತ್ರೆಗೆ ಸೇರಿಸಲಾಗಿತ್ತು. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮತ್ತೊಂದು ragging : ಬೆತ್ತಲು ಮಾಡಿ ಬಚ್ಚಲು ತೊಳಿಸಿದರು

ರಾಘು ಮೂಲತಃ ಶಿಕಾರಿಪುರ ತಾಲೂಕು ಹೊಸೂರಿನ ನಿವಾಸಿ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಊರಿನಲ್ಲಿ ದೀಪಾವಳಿ ಹಬ್ಬ ಮುಗಿಸಿ ಹಾಸ್ಟೆಲ್‌ಗೆ ಮರಳಿದ್ದ. ಮನೆಯಲ್ಲಿ ಯಾವುದೇ ತೊಂದರೆ ಇರಲಿಲ್ಲ. ರೂಮಿಗೆ ಬಂದ ಸ್ವಲ್ಪ ಸಮಯದಲ್ಲೇ ನೇಣು ಹಾಕಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರು ragging ಪ್ರಕರಣ, ವಿದ್ಯಾರ್ಥಿ ಬಂಧನ

ಆತ್ಮಹತ್ಯೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Shivamogga medical college 1st year student Raghu committed suicide by hanging from the ceiling fan of his hostel room on Sunday, October 23, 2017 night.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ