ಜೆಡಿಎಸ್ 140 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ : ರೇವಣ್ಣ

Posted By: Gururaj
Subscribe to Oneindia Kannada

ಶಿವಮೊಗ್ಗ, ನವೆಂಬರ್ 2 : '2018ರ ವಿಧಾನಸಭೆ ಚುನಾವಣೆಗೆ ಪಕ್ಷದ 140 ಅಭ್ಯರ್ಥಿಗಳ ಪಟ್ಟಿ ತಯಾರಾಗಿದೆ. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು' ಎಚ್.ಡಿ.ರೇವಣ್ಣ ಹೇಳಿದರು.

ಕಾಂಗ್ರೆಸ್, ಬಿಜೆಪಿ ಯಾತ್ರೆಯನ್ನು ಲೇವಡಿ ಮಾಡಿದ ರೇವಣ್ಣ!

ಗುರುವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೇವಣ್ಣ ಅವರು, '2018ರ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ತಯಾರಿದ್ದು 224 ಮತ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತೇವೆ. ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಕುಮಾರಸ್ವಾಮಿ ಬಿಡುಗಡೆ ಮಾಡುವರು' ಎಂದರು.

2018 election, JDS 140 candidates list ready says HD Revanna

'ನಾನು ರೈತರ ಸಮಸ್ಯೆ ಪರಿಹರಿಸುವ ಅಭ್ಯರ್ಥಿಯಾಗಿದ್ದೇನೆ. ಕುಮಾರಸ್ವಾಮಿಯವರು ಮುಂದಿನ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಜೆಡಿಎಸ್ ರೈತರ ಪಕ್ಷವಾಗಲಿದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ' ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಲಿದೆ ಜೆಡಿಎಸ್

ನಟ ಉಪೇಂದ್ರ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರು ಪಕ್ಷ ಸ್ಥಾಪನೆ ಮಾಡಿದ ಬಗ್ಗೆ ಗೌರವವಿದೆ. ಜನರಲ್ಲಿ ಇವರು ವಿಶ್ವಾಸ ಮೂಡಿಸಿ ಅಧಿಕಾರಕ್ಕೆ ಬಂದಲ್ಲಿ ನಾವು ಶುಭ ಹಾರೈಸುತ್ತೇವೆ. ಆದರೆ, ಕಾಂಗ್ರೆಸ್ ಪಕ್ಷದವರ ಥರ ಅವಹೇಳನಕಾರಿ ಹೇಳಿಕೆ ನೀಡುವುದಿಲ್ಲ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Party 140 candidates first ready for Karnataka assembly elections 2018 said JDS leader H.D.Revanna.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ