ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚತುಷ್ಪಥವಾಗಲಿದೆ ಶಿವಮೊಗ್ಗ-ತುಮಕೂರು ರಸ್ತೆ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 14 : ಶಿವಮೊಗ್ಗ ಭಾಗದ ಜನರ ಹಲವು ದಿನಗಳ ಬೇಡಿಕೆ ಈಡೇರುತ್ತಿದೆ. ಫೆ.19ರಂದು ಶಿವಮೊಗ್ಗ-ತುಮಕೂರು ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶಂಕುಸ್ಥಾಪನೆ ನಡೆಯಲಿದೆ.

ಶಿವಮೊಗ್ಗ-ತುಮಕೂರು ನಡುವೆ ಪ್ರಸ್ತುತ ದ್ವಿಪಥದ ರಸ್ತೆ ಇದೆ. ಇದನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಫೆ.19ರಂದು ಯೋಜನೆಗೆ ಶಂಕುಸ್ಥಾಪನೆಯನ್ನು ಮಾಡಲಾಗುತ್ತದೆ.

 ಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸು ಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸು

ಕರ್ನಾಟಕ ಬಿಜೆಪಿ ಅಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

4 lane road from Shivamoga to Tumakuru soon

'ಶಿವಮೊಗ್ಗ-ತುಮಕೂರು ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಯೋಜನೆಗೆ ಸುಮಾರು 3600 ಕೋಟಿ ವೆಚ್ಚವಾಗಲಿದೆ' ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

'ಶಿವಮೊಗ್ಗ-ಹೊನ್ನಾಳಿ, ಶಿವಮೊಗ್ಗ-ಹಾವೇರಿ ರಸ್ತೆಗಳನ್ನು ಉನ್ನತೀಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದು ನಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಸಿಕ್ಕ ಫಲ' ಎಂದು ಯಡಿಯೂರಪ್ಪ ಹೇಳಿದರು.

 ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು

ಹಲವು ಕಾಮಗಾರಿಗೆ ಚಾಲನೆ : ಫೆ.19ರಂದು ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಸಾಗರ ತಾಲೂಕಿನ ಸಿಗಂಧೂರಿಗೆ ಹೋಗಲು ಅನುಕೂಲವಾಗುವಂತೆ ಕಳಸವಳ್ಳಿ-ಅಂಬಾರಗೋಡ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣವಾಗಲಿದೆ. ಈ ಯೋಜನೆಗೂ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

English summary
Union minister for road transport and highways Nitin Gadkari will lay foundation stone for Shivamoga-Tumakuru 4 lane road on February 19, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X