ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಉಪ ಚುನಾವಣೆ : ಮಧು ಬಂಗಾರಪ್ಪಗೆ ಎಎಪಿ ಬೆಂಬಲ

|
Google Oneindia Kannada News

Recommended Video

ಶಿವಮೊಗ್ಗ ಉಪಚುನಾವಣೆ | ಮಧು ಬಂಗಾರಪ್ಪಗೆ ಆಮ್ ಆದ್ಮಿ ಪಕ್ಷದಿಂದ ಬೆಂಬಲ | Oneindia Kannada

ಶಿವಮೊಗ್ಗ, ಅಕ್ಟೋಬರ್ 26 : ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಬೆಂಬಲ ಘೋಷಣೆ ಮಾಡಿದೆ. ನವೆಂಬರ್ 3ರಂದು ಲೋಕಸಭೆ ಉಪ ಚುನಾವಣೆ ನಡೆಯಲಿದೆ.

ಆಮ್‌ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ರವಿ ಕುಮಾರ್ ಅವರು ಬೆಂಬಲ ಘೋಷಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅಧಿಕಾರದಿಂದ ದೂರವಿಡಲು ಮಧು ಬಂಗಾರಪ್ಪ ಅವರನ್ನು ಬೆಂಬಲಿಸುವುದಾಗಿ ಪಕ್ಷ ಹೇಳಿದೆ.

ಶಿವಮೊಗ್ಗ ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ!ಶಿವಮೊಗ್ಗ ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ!

ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಒಮ್ಮತದ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಣದಲ್ಲಿದ್ದಾರೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ಶಿವಮೊಗ್ಗ ಉಪ ಚುನಾವಣೆ : ನಾಯಕರ ಏಟು, ತಿರುಗೇಟುಗಳುಶಿವಮೊಗ್ಗ ಉಪ ಚುನಾವಣೆ : ನಾಯಕರ ಏಟು, ತಿರುಗೇಟುಗಳು

ಬಿಜೆಪಿಯಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗಿದ್ದಾರೆ.ಜೆಡಿಯು ಪಕ್ಷದ ಮಹಿಮಾ ಪಟೇಲ್ ಸೇರಿ ನಾಲ್ವರು ಚುನಾವಣಾ ಕಣದಲ್ಲಿದ್ದಾರೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.....

ಶಿವಮೊಗ್ಗ ಉಪ ಚುನಾವಣೆ : ಆಣೆ-ಪ್ರಮಾಣ ರಾಜಕೀಯ ಆರಂಭ!ಶಿವಮೊಗ್ಗ ಉಪ ಚುನಾವಣೆ : ಆಣೆ-ಪ್ರಮಾಣ ರಾಜಕೀಯ ಆರಂಭ!

ಜಿಲ್ಲೆ ಅಭಿವೃದ್ದಿಯ ನಿರ್ಲಕ್ಷ್ಯ

ಜಿಲ್ಲೆ ಅಭಿವೃದ್ದಿಯ ನಿರ್ಲಕ್ಷ್ಯ

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ ಭದ್ರಾವತಿಯ ವಿಐಎಸ್‌ಎಲ್, ಎಂಪಿಎಂ ಹಾಗೂ ಜಿಲ್ಲೆಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಾರೆ. ಅವರ ನಿರ್ಲಕ್ಷ್ಯದಿಂದ ಎರಡೂ ಕಾರ್ಖನೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಈಗ ಚುನಾವಣೆ ಸಂದರ್ಭದಲ್ಲಿ ಅಭಿವೃದ್ಧಿ ಮಾಡುವುದಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಯಾವ ಪ್ರಯತ್ನವನ್ನೂ ಮಾಡಿಲ್ಲ

ಯಾವ ಪ್ರಯತ್ನವನ್ನೂ ಮಾಡಿಲ್ಲ

ಸಂಸದರಾಗಿದ್ದಾಗ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ದಿಗೆ ಯಾವ ಪ್ರಯತ್ನವನ್ನು ಮಾಡಿಲ್ಲ. ಬಿಜೆಪಿ ಅಭ್ಯರ್ಥಿಯಾದ ಅವರನ್ನು ಅಧಿಕಾರದಿಂದ ದೂರವಿಡಲು ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಉಪ ಚುನಾವಣೆಯಲ್ಲಿ ಬೆಂಬಲಿಸಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷ ಹೇಳುತ್ತಿದೆ.

ಉಪ ಚುನಾವಣೆ ಬೇಕಾಗಿರಲಿಲ್ಲ

ಉಪ ಚುನಾವಣೆ ಬೇಕಾಗಿರಲಿಲ್ಲ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಗತ್ಯವಿರಲಿಲ್ಲ. ಜನರ ಕೋಟ್ಯಾಂತರ ರೂ. ತೆರಿಗೆ ಹಣ ಖರ್ಚು ಮಾಡಿ ಉಪ ಚುನಾವಣೆ ನಡೆಸಲಾಗುತ್ತಿದೆ. ಕೋಮುವಾದಿ ಪಕ್ಷವನ್ನು ದೂರವಿಡಲು ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಬೆಂಬಲಿಸಲಾಗುತ್ತಿದೆ ಎಂದು ಎಎಪಿ ಹೇಳಿದೆ.

ಮೂವರು ಮಾಜಿ ಸಿಎಂ ಮಕ್ಕಳು

ಮೂವರು ಮಾಜಿ ಸಿಎಂ ಮಕ್ಕಳು

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಹಲವು ಕಾರಣಗಳಿಗೆ ಕುತೂಹಲಕ್ಕೆ ಕಾರಣವಾಗಿದೆ. ಮೂವರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಚುನಾವಣಾ ಕಣದಲ್ಲಿದ್ದಾರೆ. ಆದರೆ, ಮಹಿಮಾ ಪಟೇಲ್ ಸ್ಪರ್ಧೆಗೆ ಯಾವ ಬೆಲೆಯೂ ಇಲ್ಲ. ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ಅವರ ನಡುವೆ ಪ್ರಬಲ ಪೈಪೋಟಿ ನಡೆದಿದೆ.

English summary
The Aam Aadmi Party (AAP) Shivamogga district unit extended support to the JD(S)-Congress alliance candidate Madhu Bangarappa in Shivamogga Lok Sabha by election, scheduled on November 3, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X