ಸಿಗಂದೂರಿಗೆ ಹೊರಟ್ಟಿದ್ದ ಬೆಂಗಳೂರಿನ ಮೂವರು ಮರಣ

Posted By:
Subscribe to Oneindia Kannada

ಶಿವಮೊಗ್ಗ, ಡಿ.4: ಸಾಗರ ತಾಲೂಕಿನ ಶ್ರೀಕ್ಷೇತ್ರ ಸಿಂಗದೂರಿಗೆ ತೆರಳುತ್ತಿದ್ದ ಬೆಂಗಳೂರಿನ ಯಾತ್ರಾರ್ಥಿಗಳು ಭಾನುವಾರ ಬೆಳಗ್ಗೆ ಕುಂಸಿ ಬಳಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ವಾಹನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ತೀವ್ರ ಗಾಯಗಳಾಗಿವೆ.

ಮೃತರನ್ನು ಬೆಂಗಳೂರಿನ ಜಯದೇವ್, ಮಂಜುನಾಥ್ ಹಾಗೂ ಧನಂಜಯ್ ಎಂದು ಗುರುತಿಸಲಾಗಿದೆ.. ಘಟನೆಯಲ್ಲಿ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Accident at Kumsi kills three, Sigandur Pilgrims from Bengaluru

ಶಿವಮೊಗ್ಗದ ಸಿಗಂದೂರು ದೇವಿಯ ದರ್ಶನಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಓಮ್ನಿ ಕಾರು ಭಾನುವಾರ ಮುಂಜಾನೆ ಕುಂಸಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಅಪ್ಪಳಿಸಿದೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A Maruti Omni van rams into a tree near Kumsi, Shivamogga district in the wee hours of Sunday. Three killed and two injured in the accident and all are from Bengaluru were on the way to Singandur temple.
Please Wait while comments are loading...