ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಣಂದೂರಿನಲ್ಲಿ ಮಳೆ ಹೊಡೆತಕ್ಕೆ ಗೋಡೆ ಕುಸಿದು ಬಾಲಕ ಸಾವು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ತೀರ್ಥಹಳ್ಳಿ, ಆಗಸ್ಟ್.16: ಭಾರೀ ಮಳೆಗೆ ತಾಲೂಕಿನ ಕೋಣಂದೂರಿನ ಕೆಇಬಿ ಹಿಂಭಾಗದಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕ ಅಯುಬ್ ಎಂಬುವವರ ಮನೆ ಗೋಡೆ ಕುಸಿದು ಅವರ ಮಗ ಮಸೂದ್ (5 ವರ್ಷ) ಇಂದು ಗುರುವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಕೋಣಂದೂರು ಪೋಲಿಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಕಾಫಿ ಕುಡಿಯುತ್ತ ಕುಳಿತಿದ್ದ ಸಮಯದಲ್ಲಿ ಮಳೆಯಿಂದ ತೇವಗೊಂಡಿದ್ದ ಗೋಡೆ ಕುಸಿದು ಬಾಲಕನ ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮಲೆನಾಡಲ್ಲಿ ನಿಲ್ಲದ ಮಳೆ ಅಬ್ಬರ, ನಾಲ್ಕೈದು ಕಡೆ ಬಿರುಕುಬಿಟ್ಟ ರಸ್ತೆಮಲೆನಾಡಲ್ಲಿ ನಿಲ್ಲದ ಮಳೆ ಅಬ್ಬರ, ನಾಲ್ಕೈದು ಕಡೆ ಬಿರುಕುಬಿಟ್ಟ ರಸ್ತೆ

ಕೂಲಿ ಕಾರ್ಮಿಕ ಅಯುಬ್ ಅವರದ್ದು ಬಡ ಕುಟುಂಬ. ಇದೀಗ ಮನೆಯಲ್ಲಿ ಎಲ್ಲರ ನೆಚ್ಚಿನವನಾಗಿದ್ದ ಮುದ್ದಿನ ಮಗ ಮಸೂದ್ ಕಳೆದುಕೊಂಡು ಕುಟುಂಬ ಅತೀವ ದುಃಖದಲ್ಲಿದ್ದು, ಪೋಷಕರ
ಆಕ್ರಂದನ ಮುಗಿಲು ಮುಟ್ಟಿದೆ.

ಶಿವಮೊಗ್ಗ ಸೇರಿದಂತೆ, ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ ಭಾಗಗಳಲ್ಲಿ ಕಳೆದೆರೆಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಬಾಬಾಬುಡನ್ ಗಿರಿ, ಮುಳ್ಳಯ್ಯನ ಗಿರಿ ಸಂಚಾರ ಸ್ಥಗಿತಗೊಳಿಸಲಾಗಿದೆ.

Boy dies in konanduru for wall collapse

ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಮಳೆಯ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತಿದ್ದು, ರಸ್ತೆ ಬದಿಯ ಮಣ್ಣು ಕುಸಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುರುವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದೆ. ಕೆಲವೆಡೆ ಗಾಳಿ, ಮಳೆಯಾಗುತ್ತಿದೆ.

ಈ ನಡುವೆ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಪಾಯದ ಮಟ್ಟ ಮೀರಿದ ಕುಮಾರಾಧಾರಾ ನದಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ದ್ವೀಪವಾಗಿ ಮಾರ್ಪಟ್ಟಿದೆ.

English summary
Labour Ayub house wall collapses and his son Masood (5 years old) has died on Thursday morning. Incident occurred at Konanduru in Thirthahalli taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X