ಮಗನಿಗೆ ಶಿಕಾರಿಪುರ ದಕ್ಕಿಸಿಕೊಟ್ಟ ಯಡಿಯೂರಪ್ಪ
ಶಿವಮೊಗ್ಗ, ಆ.25 : ಶಿಕಾರಿಪುರ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಶಿಕಾರಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಜಯಗಳಿಸಿದ್ದಾರೆ. ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಬೆಂಬಲ ಪಡೆದಿದ್ದ ಕಾಂಗ್ರೆಸ್ ಪ್ರಯತ್ನ ಫಲ ನೀಡಲಿಲ್ಲ.
ಸೋಮವಾರ ನಡೆದ ಶಿಕಾರಿಪುರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿ.ವೈ.ರಾಘವೇಂದ್ರ ಅವರು 6,430 ಮತಗಳ ಅಂತರಿಂದ ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ ವಿರುದ್ಧ ಜಯಗಳಿಸಿದ್ದಾರೆ. ಈ ಮೂಲಕ ತಮ್ಮ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಿಕೊಳ್ಳುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. [ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ]

ರಾಜ್ಯದ ತೀವ್ರ ಕುತೂಹಲ ಕೆರಳಿಸಿದ್ದ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಭಾರೀ ಅಂತರದಿಂದ ಜಯಗಳಿಸಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆ ಮಟ್ಟಿಗೆ ಕಾಂಗ್ರೆಸ್ ತೀವ್ರ ಪ್ರತಿಸ್ಪರ್ಧೆ ನೀಡಿದೆ. 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಜಯಗಳಿಸಿದ್ದಾರೆ. [ಚಿಕ್ಕೋಡಿ ಸದಲಗಾ : ಗಣೇಶ್ ಹುಕ್ಕೇರಿಗೆ ಜಯ]
ಫಲ ನೀಡದ ಹೊಂದಾಣಿಕೆ : ಶಿಕಾರಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬೆಂಬಲ ಕೋರಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಒಟ್ಟಾಗಿ ಪ್ರಚಾರ ನಡೆಸಿದ್ದರು. ಆದರೆ, ಆ ಪ್ರಯತ್ನ ಫಲ ಕೊಟ್ಟಿಲ್ಲ. [ಬಳ್ಳಾರಿ ಕೈವಶ, ರೆಡ್ಡಿಪಾಳಯಕ್ಕೆ ಮುಖಭಂಗ]
ಪಡೆದ ಮತಗಳ ವಿವರ
ಬಿ.ವೈ.ರಾಘವೇಂದ್ರ - 71,547
ಶಾಂತವೀರಪ್ಪ ಗೌಡ -65,117












Click it and Unblock the Notifications