ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರೇಕಿಂಗ್ ನ್ಯೂಸ್ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸೋಲ್ಲ!

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 13 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದೆ. ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿಲ್ಲ.

ಶನಿವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಉಪ ಚುನಾವಣೆ ಹಾಗೂ ಇತರೆ ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಸಚಿವರುಗಳ ಸಭೆ ನಡೆಯಿತು.

ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಈಗ ಎಲ್ಲಿದ್ದಾರೆ?ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಈಗ ಎಲ್ಲಿದ್ದಾರೆ?

ಈ ಸಭೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ.

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಅಭ್ಯರ್ಥಿ ಆಯ್ಕೆ ಬಗ್ಗೆ ಗೌಡ್ರ ಗೊಂದಲಶಿವಮೊಗ್ಗ ಲೋಕಸಭಾ ಕ್ಷೇತ್ರ : ಅಭ್ಯರ್ಥಿ ಆಯ್ಕೆ ಬಗ್ಗೆ ಗೌಡ್ರ ಗೊಂದಲ

ನವೆಂಬರ್ 3ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅಭ್ಯರ್ಥಿ......

ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?

ಸೂಕ್ತ ಅಭ್ಯರ್ಥಿ ಇಲ್ಲ

ಸೂಕ್ತ ಅಭ್ಯರ್ಥಿ ಇಲ್ಲ

ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಅಭ್ಯರ್ಥಿ ಸಿಕ್ಕಿಲ್ಲ. ಆದ್ದರಿಂದ, ಉಪ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದೇ ಜೆಡಿಎಸ್‌ಗೆ ಬೆಂಬಲ ನೀಡಲಿದೆ.

ಆದರೆ, ಈ ನಿರ್ಣಯ ಉಪ ಚುನಾವಣೆಗೆ ಮಾತ್ರ ಅನ್ವಯವಾಗಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಅನ್ವಯಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈಗ ಶಿವಮೊಗ್ಗ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಬೇಕಿದೆ.

ಇಬ್ಬರು ಸಚಿವರು ನಿರಾಕರಿಸಿದ್ದರು

ಇಬ್ಬರು ಸಚಿವರು ನಿರಾಕರಿಸಿದ್ದರು

2014ರ ಲೋಕಸಭೆ ಚುನಾವಣೆಯಲ್ಲಿ ಮಂಜುನಾಥ ಭಂಡಾರಿ ಅವರು ಬಿ.ಎಸ್.ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ 242911 ಮತಗಳನ್ನು ಪಡೆದಿದ್ದರು. ಆದರೆ, ಈಗ ಉಪ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲು ಒಪ್ಪಿಗೆ ಕೊಟ್ಟಿಲ್ಲ.

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಿಮ್ಮನೆ ರತ್ನಾಕರ ಅವರನ್ನು ಕಣಕ್ಕಿಳಿಸಲು ಪಕ್ಷ ಬಯಸಿತ್ತು. ಆದರೆ, ಉಭಯ ನಾಯಕರು ಸ್ಪರ್ಧೆಗೆ ಒಪ್ಪಿಗೆ ನೀಡಲಿಲ್ಲ. ಆದ್ದರಿಂದ, ಕಾಂಗ್ರೆಸ್ ಜೆಡಿಎಸ್‌ ಬೆಂಬಲಿಸುವ ನಿರ್ಧಾರವನ್ನು ಕೈಗೊಂಡಿದೆ.

ಜೆಡಿಎಸ್ ಅಭ್ಯರ್ಥಿ ಯಾರು?

ಜೆಡಿಎಸ್ ಅಭ್ಯರ್ಥಿ ಯಾರು?

ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು?. ಪಕ್ಷ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ, ಅವರು ವಿದೇಶ ಪ್ರವಾಸದಲ್ಲಿದ್ದು, ಭಾನುವಾರ ವಾಪಸ್ ಆಗುವ ಸಾಧ್ಯತೆ ಇದೆ. ನಂತರ ನಿರ್ಧಾರವನ್ನು ತಿಳಿಸಲಿದ್ದಾರೆ.

ಮಧು ಬಂಗಾರಪ್ಪ ಅವರು ಒಪ್ಪದಿದ್ದರೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅಥವ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸುವ ಕುರಿತು ಚರ್ಚೆಗಳು ನಡೆದಿವೆ. ಯಾವುದೇ ಹೆಸರು ಇನ್ನೂ ಅಂತಿಮಗೊಂಡಿಲ್ಲ.

ಬಳ್ಳಾರಿ, ಜಮಖಂಡಿ ಚುನಾವಣೆ

ಬಳ್ಳಾರಿ, ಜಮಖಂಡಿ ಚುನಾವಣೆ

ಶಿವಮೊಗ್ಗ ಲೋಕಸಭೆ ಉಪ ಚುನಾವಣೆ ಜೊತೆಗೆ ಬಳ್ಳಾರಿ ಲೋಕಸಭೆ, ಜಮಖಂಡಿ ವಿಧಾನಸಭೆ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಯಿತು. ಬಳ್ಳಾರಿಗೆ ಶಾಸಕ ಬಿ.ನಾಗೇಂದ್ರ ಅವರು ಸಹೋದರ ವೆಂಕಟೇಶ ಪ್ರಸಾದ್, ಜಮಖಂಡಿಯಿಂದ ದಿ.ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.

English summary
Congress candidate will not contest for Shivamogga Lok Sabha by election scheduled on November 3, 2018. Party will support JD(S) in election decision taken in the meeting chaired by AICC General Secretary and Karnataka in-charge of the party K.C.Venugopal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X