ಪ್ರಾಮಾಣಿಕ ಅಧಿಕಾರಿಗಳಿಗೆ ರಾಜ್ಯದಲ್ಲಿ ಭಯ ಕಾಡುತ್ತಿದೆ: ಈಶ್ವರಪ್ಪ

Posted By: Nayana
Subscribe to Oneindia Kannada

ಶಿವಮೊಗ್ಗ, ಮಾರ್ಚ್ 09: ಶಿವಮೊಗ್ಗದಲ್ಲಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

ಅನುರಾಗ್ ತಿವಾರಿ ಅವರು ಸತ್ತಿದ್ದು ಉಸಿರುಗಟ್ಟಿದ್ದರಿಂದ!

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿಗೆ ಸಿಎಂ ಸಿದ್ದರಾಮಯ್ಯನವರೆ ಕಾರಣ. ಈ ಕುರಿತು ಅನುರಾಗ್ ತಂದೆ ಆರೋಪಿಸಿದ್ದು, ಇದು ಕರ್ನಾಟಕಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು. ರಾಜ್ಯದಲ್ಲಿ ಪ್ರಮಾಣಿಕ ಅಧಿಕಾರಿಗಳಿಗೆ ಭಯವುಂಟು ಮಾಡಿದೆ ಎಂದರು.

Eshwarappa slames government as honest officer in fear

ತಿವಾರಿ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯನವರು ರಾಜ್ಯ ಜನತೆ ಮುಂದೆ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಸಮಾಜಗಳನ್ನು ಒಡೆಯುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ವೀರಶೈವ. ಲಿಂಗಾಯತ ಧರ್ಮದ ವಿಚಾರದಲ್ಲಿ ಸಚಿವ ಸಂಪುಟದಲ್ಲೇ ಎರಡು ಗುಂಪುಗಳಾಗಿವೆ. ಧರ್ಮ ಒಡೆಯುವ ಕೆಲಸ ಮಾಡುವವರಿಗೆ ಎಂದು ಯಶಸ್ಸು ದೊರೆಯುವುದಿಲ್ಲ. ಆಡಳಿತ ವೈಫಲ್ಯ ಮುಚ್ಚು ಹಾಕಲು ಧರ್ಮ ಜಗಳ ತರುತ್ತಿದ್ದಾರೆ ಎಂದು ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Legislative council opposition leader KS Eshwarappa slamed the state government that the honest officials in fear of insecurity.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ