ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ ಅಗಲೀಕರಣ, ಗುತ್ತಿಗೆದಾರನಿಗೆ ಸಂಕಷ್ಟ

Posted By: Gururaj
Subscribe to Oneindia Kannada

ಶಿವಮೊಗ್ಗ, ಡಿಸೆಂಬರ್ 22 : ಶಿವಮೊಗ್ಗ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಚಿತ್ರಗಳಲ್ಲಿ : ತೀರ್ಥಹಳ್ಳಿಯಲ್ಲಿ ವಿಶ್ವದರ್ಜೆಯ ಚತುಷ್ಪಥ ರಸ್ತೆ

ರಾಷ್ಟ್ರೀಯ ಹೆದ್ದಾರಿ - 17ರ ಅಗಲೀಕರಣದ ಸಮಯದಲ್ಲಿ ಹಲವು ಮರಳನ್ನು ಕಡಿಯಲಾಗಿದೆ. ನಿಗದಿ ಪಡಿಸಿದ ಪ್ರದೇಶಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿದೆ. ಬಿದಿರು ನಾಶ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

FIR against Shivamogga-Thirthahalli road expression work contractor

ಪರಿಸರವಾದಿಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಲುವರಾಜು ಅವರು ಶೆಟ್ಟಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು.

ಜನವರಿ 2ನೇ ವಾರದಿಂದ 5 ತಿಂಗಳು ಶಿರಾಡಿ ಘಾಟ್ ರಸ್ತೆ ಬಂದ್‌

ಈ ಸಮಯದಲ್ಲಿ ಪರಿಸರವಾದಿಗಳು ಮಾಡಿರುವ ಆರೋಪ ಸತ್ಯ ಎಂಬುದು ಬೆಳಕಿಗೆ ಬಂದಿದೆ. ಆದ್ದರಿಂದ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಸೂಚನೆ ನೀಡಿದ್ದಾರೆ.

ಸುಮಾರು ಒಂದು ವರ್ಷದಿಂದ ಶಿವಮೊಗ್ಗ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಣ ಮಾಡಿ ಅಭಿವೃದ್ಧಿ ಮಾಡಲಾಗುತ್ತಿದೆ. ರಸ್ತೆ ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯಲ್ಲಿಯೂ ಹಾದು ಹೋಗುತ್ತದೆ.

ಮೋರಿಗಳನ್ನು ನಿರ್ಮಾಣ ಮಾಡಲು ಹಲವು ಕಡೆ ರಸ್ತೆಗಳನ್ನು ಅಗೆಯಲಾಗಿದೆ. ಗಾಜನೂರು ಸಮೀಪ ರಸ್ತೆ ಗುಂಡಿಗೆ ಬಿದ್ದು ಮಹೇಶ್ (35) ಎನ್ನುವ ವ್ಯಕ್ತಿ ಮುರು ದಿನಗಳ ಹಿಂದೆ ಮೃತಪಟ್ಟಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Shivamogga Wildlife Division Deputy Forest Conservator Cheluvaraj ordered to file FIR against Shivamogga-Thirthahalli National highway 17 road expression work contractor for violation of the law and cutting tree across the road.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ