ಶಿವಮೊಗ್ಗ : 2.5 ಕೆಜಿ ಅಕ್ರಮ ಗಾಂಜಾ ವಶ. ನಾಲ್ವರ ಬಂಧನ

Posted By: ಶಿವಮೊಗ್ಗ ಪ್ರತಿನಿಧಿ
Subscribe to Oneindia Kannada

ಶಿವಮೊಗ್ಗ, ಡಿಸೆಂಬರ್ 31 : ಶಿವಮೊಗ್ಗಕ್ಕೆ ಅಕ್ರಮವಾಗಿ ಗಾಂಜಾ ಪೂರೈಕೆಯಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಗರದ ಎರಡು ಕಡೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಎಸ್ಪಿ ಅಭಿನವ್ ಖರೆ ಮತ್ತು ಹೆಚ್ಚುವರಿ ಎಸ್ಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವ್ಯಕ್ತಿಯ ಬಂಧನ

Ganja seized and 4 arrested in Shivamogga

2.5 ಕೆಜಿ ಗಾಂಜಾ ಮತ್ತು 49 ಪೌಚ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಆರ್‌ಎಸ್‌ ನಿವಾಸಿ ಅರವಿಂದ, ರಂಗಸ್ವಾಮಿ, ಪುರಲೆ ಗ್ರಾಮದ ಕುಮಾರ್, ಮಂಜು ಎಂಬುವವರನ್ನು ಬಂಧಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದವನ ಬಂಧನ

ಶಂಕರ್ ಎನ್ನುವ ಆರೋಪಿ ತಲೆಮರೆಸಿಕೊಂಡಿದ್ದು, ಡಿಸಿಬಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ. ಶಂಕರ್ ಗಾಂಜಾ ಪೂರೈಕೆ ಮಾಡುತ್ತಿದ್ದ ಕಿಂಗ್ ಪಿನ್ ಎಂದು ತಿಳಿದುಬಂದಿದೆ.

Ganja seized and 4 arrested in Shivamogga

ಆರೋಪಿಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಗರಕ್ಕೆ ಅಕ್ರಮವಾಗಿ ಗಾಂಜಾ ಪೂರೈಕೆಯಾಗುತ್ತಿದೆ ಎಂದು ಹಲವು ದಿನಗಳಿಂದ ಆರೋಪ ಮಾಡಲಾಗುತ್ತಿತ್ತು.

ಮೈಸೂರು: ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ, 8 ಕೆಜಿ ಮಾಲು ವಶ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Four persons were arrested and 2.5 kg of ganja was seized by District Crime Branch (DCB) police in Shivamogga city, Karnataka.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ