ಗೀತಾ ಶಿವಣ್ಣ ಮಾಧ್ಯಮ ಸಂವಾದ ಹೈಲೈಟ್ಸ್
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು 'ಜೀವನ ಚೈತ್ರ' ಸಿನಿಮಾದಲ್ಲಿ "ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ, ಸಾಯೋ ತನಕ ಸಂಸಾರದೊಳಗೆ ಗಂಡಾಗುಂಡಿ...ಇರೋದರೊಳಗೆ ಒಮ್ಮೆ ನೋಡು ಜೋಗದ ಗುಂಡಿ" ಎಂದು ಹಾಡಿ ಜೋಗ ಜಲಪಾತದ ಮಹತ್ವವನ್ನು ಮತ್ತೊಮ್ಮೆ ಅಭಿಮಾನಿ ದೇವರುಗಳಿಗೆ ನೆನಪಿಸಿದ್ದರು.
ಇದೀಗ ಅವರ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಅದೇ ಜೋಗ ಜಲಪಾತ ಧುಮ್ಮಿಕ್ಕುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಮಾರ್ಚ್ 27ಕ್ಕೆ ಅವರು ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. [ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ಸಂದರ್ಶನ]

ತಮ್ಮ ತವರೂರು ಶಿವಮೊಗ್ಗದಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತಿರುವ ಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮುಖಾಮುಖಿಯಾದರು. ತಮ್ಮ ಪ್ರಬಲ ಸ್ಪರ್ಧಿ ಮಾಜಿ ಮುಖ್ಯಮಂತ್ರಿ ಹಳೆ ಹುಲಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಅವರು ಸೆಣೆಸುತ್ತಿರುವುದು ಅತೀವ ಕುತೂಹಲ ಕೆರಳಿಸಿದೆ.
ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವುದೇ ಚಾನಲ್, ಮಾಧ್ಯಮಗಳ ಜೊತೆ ಸಂವಾದ, ಸಂದರ್ಶನಕ್ಕೆ ಗೀತಾ ಬಂದವರೇ ಅಲ್ಲ. ಮಾಧ್ಯಮಗಳ ಜೊತೆಗಿನ ಸಂವಾದ ಅವರಿಗೆ ಇದೇ ಮೊದಲು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತನ್ನ ಮುದ್ದಿನ ಮಡದಿ ಜೊತೆ ಸಂವಾದದಲ್ಲಿ ಸಾಥ್ ನೀಡಿದರು.
ಪ್ರೆಸ್ ಕ್ಲಬ್ ಗೆ ಶಿವಣ್ಣ ಇದುವರೆಗೂ ಹೆಚ್ಚೆಂದರೆ ಒಂದೆರಡು ಬಾರಿ ಬಂದಿರಬಹುದಷ್ಟೆ. ಮೊದಲು ಮಾತನಾಡಿದ ಶಿವಣ್ಣ ತಮ್ಮ ಪತ್ನಿ ಯಾಕೆ ಸ್ಪರ್ಧಿಸುತ್ತಿದ್ದಾರೆ. ರಾಜಕೀಯಕ್ಕೆ ಅಡಿಯಿಟ್ಟಿದ್ಯಾಕೆ ಎಂದು ಹೇಳುತ್ತಾ ಗೀತಾ ಅವರಲ್ಲಿದ್ದ ಕೊಂಚ ದುಗುಡವನ್ನು ದೂರ ಮಾಡಿದರು. ಬನ್ನಿ ಶಿವಣ್ಣ ಏನು ಹೇಳಿದರು ಎಂಬುದನ್ನು ನೋಡೋಣ ಓವರ್ ಟು ಶಿವಣ್ಣ...
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications