ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೇಳೂರು ಗೋಪಾಲಕೃಷ್ಣ ಕೈ ತಪ್ಪಲಿದೆ ಸಾಗರದ ಟಿಕೆಟ್?

|
Google Oneindia Kannada News

Recommended Video

ಯಡಿಯೂರಪ್ಪನವರು ಮುಂಬರುವ ಚುನಾವಣೆಗೆ ಸಾಗರದಿಂದ ಬಿಜೆಪಿ ಅಭ್ಯರ್ಥಿ ಘೋಷಣೆ | Oneindia Kannada

ಶಿವಮೊಗ್ಗ, ಡಿಸೆಂಬರ್ 06 : ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಹೊಸ ಸುದ್ದಿಯೊಂದು ಹಬ್ಬಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗ. 2018ರ ವಿಧಾನಸಭೆ ಚುನಾವಣೆಗೆ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ. ತವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಅವರು ತಂತ್ರ ರೂಪಿಸಿದ್ದಾರೆ. ಅದಕ್ಕಾಗಿ ಸಾಗರದ ಅಭ್ಯರ್ಥಿ ಬದಲಾವಣೆ ಮಾಡಲಿದ್ದಾರೆ.

ಶಿವಮೊಗ್ಗ ರಾಜಕಾರಣ : ಆರ್.ಎಂ.ಮಂಜುನಾಥ ಗೌಡ ಜೆಡಿಎಸ್‌ಗೆ?ಶಿವಮೊಗ್ಗ ರಾಜಕಾರಣ : ಆರ್.ಎಂ.ಮಂಜುನಾಥ ಗೌಡ ಜೆಡಿಎಸ್‌ಗೆ?

ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಬದಲಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಸಾಗರದಲ್ಲಿ ನಡೆಯುವ ಪರಿವರ್ತನಾ ಯಾತ್ರೆಯ ಉಸ್ತುವಾರಿಯನ್ನು ಹಾಲಪ್ಪ ಅವರಿಗೆ ವಹಿಸುವಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಅವರಿಗೆ ಯಡಿಯೂರಪ್ಪ ಸೂಚಿಸಿದ್ದಾರೆ.

ಅತ್ಯಾಚಾರ ಕೇಸ್ : ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್ಅತ್ಯಾಚಾರ ಕೇಸ್ : ಮಾಜಿ ಸಚಿವ ಹರತಾಳು ಹಾಲಪ್ಪಗೆ ಕ್ಲೀನ್ ಚಿಟ್

2018ರ ಚುನಾವಣೆಗೆ ಸಾಗರ ಕ್ಷೇತ್ರದಿಂದ ಬೇಳೂರು ಗೋಪಾಲಕೃಷ್ಣ ಟಿಕೆಟ್ ಆಕಾಂಕ್ಷಿಯಾಗಿದ್ದರು. 2013ರ ಚುನಾವಣೆಯಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 23,217 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು...

'ನನ್ನ ವಿರುದ್ಧ ಪಿತೂರಿ ನಡೆಸಿದವರಿಗೆ ನಿರಾಸೆಯಾಗಿದೆ''ನನ್ನ ವಿರುದ್ಧ ಪಿತೂರಿ ನಡೆಸಿದವರಿಗೆ ನಿರಾಸೆಯಾಗಿದೆ'

ಯಡಿಯೂರಪ್ಪ ಅವರ ಸೂಚನೆ ಏನು?

ಯಡಿಯೂರಪ್ಪ ಅವರ ಸೂಚನೆ ಏನು?

ಡಿಸೆಂಬರ್ 28ರಂದು ಸಾಗರದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆಯಲಿದೆ. ಯಾತ್ರೆಯ ಉಸ್ತುವಾರಿಯನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ವಹಿಸಬೇಕು. ಬೂತ್ ಮಟ್ಟದ ಸಂಘಟನೆಗೆ, ಗ್ರಾಮ ಪಂಚಾಯಿತಿಗಳ ಭೇಟಿಗೆ ಅವಕಾಶ ನೀಡಬೇಕು. ಈ ಕುರಿತು ಪಕ್ಷದ ಕಾರ್ಯಕರ್ತರಿಗೂ ಮಾಹಿತಿ ಕೊಡಿ ಎಂದು ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಸೂಚಿಸಿದ್ದಾರೆ.

ಪಕ್ಷ ಬದಲಾವಣೆ ಮಾಡುವ ಬೇಳೂರು

ಪಕ್ಷ ಬದಲಾವಣೆ ಮಾಡುವ ಬೇಳೂರು

ಬೇಳೂರು ಗೋಪಾಲಕೃಷ್ಣ ಅವರು ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ರೆಸಾರ್ಟ್‌ಗೆ ಹೋಗಿದ್ದರು. ಆಗ ಆ ಬಣದಲ್ಲಿ ಬೇಳೂರು ಗೋಪಾಲಕೃಷ್ಣ ಇದ್ದರು. 2013ರ ಚುನಾವಣೆಯಲ್ಲಿ ಜೆಡಿಎಸ್ ಸೇರಿದ್ದರು. ಪದೇ ಪದೇ ಪಕ್ಷ ಬದಲಾವಣೆ ಮಾಡುವುದರಿಂದ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂಬುದು ಸುದ್ದಿ.

ಕುಮಾರ್ ಬಂಗಾರಪ್ಪ ಪ್ರವೇಶದಿಂದ ಚಿತ್ರಣ ಬದಲು

ಕುಮಾರ್ ಬಂಗಾರಪ್ಪ ಪ್ರವೇಶದಿಂದ ಚಿತ್ರಣ ಬದಲು

ಕಾಂಗ್ರೆಸ್ ಪಕ್ಷದಲ್ಲಿದ್ದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ್ದಾರೆ. ಅವರಿಗೆ ಸೊರಬದಿಂದ ಟಿಕೆಟ್ ನೀಡಿ, ಹಾಲಪ್ಪ ಅವರಿಗೆ ಸಾಗರ ಕ್ಷೇತ್ರದ ಟಿಕೆಟ್ ನೀಡುವುದು ಯಡಿಯೂರಪ್ಪ ಚಿಂತನೆ. ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ. ಕುಮಾರ್ ಬಂಗಾರಪ್ಪ ಅವರು ಅಲ್ಲಿಂದ ಸ್ಪರ್ಧಿಸಿದರೆ ಸಹೋದರರ ನಡುವೆ ಪೈಪೋಟಿ ನಡೆಯಲಿದೆ.

ಸೊರಬಕ್ಕೆ ವಲಸೆ ಬಂದ ಹಾಲಪ್ಪ

ಸೊರಬಕ್ಕೆ ವಲಸೆ ಬಂದ ಹಾಲಪ್ಪ

ಹಾರತಾಳು ಹಾಲಪ್ಪ ಅವರು ಮೊದಲು ಹೊಸನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕ್ಷೇತ್ರ ಮರು ವಿಂಗಡನೆ ಬಳಿಕ ಸೊರಬ್ಬಕ್ಕೆ ಬಂದರು. ಆದರೆ, ಎಂದೂ ಅವರು ಪಕ್ಷವನ್ನು ಬದಲಾಯಿಸಿಲ್ಲ. ಯಡಿಯೂರಪ್ಪ ನಿಷ್ಠರಾಗಿಯೇ ಉಳಿದುಕೊಂಡಿದ್ದಾರೆ. ಅವರ ಮೇಲಿದ್ದ ಅತ್ಯಾಚಾರ ಪ್ರಕರಣದಲ್ಲಿಯೂ ಕ್ಲೀನ್ ಚಿಟ್ ಸಿಕ್ಕಿದೆ.

ಜೆಡಿಎಸ್‌ನಿಂದ ಬೇಳೂರು ಸ್ಪರ್ಧೆ?

ಜೆಡಿಎಸ್‌ನಿಂದ ಬೇಳೂರು ಸ್ಪರ್ಧೆ?

ಒಂದು ವೇಳೆ ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದರೆ ಜೆಡಿಎಸ್‌ನಿಂದ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಸುವ ಸಾಧ್ಯತೆ ಇದೆ. ಸೊರಬ ಶಾಸಕ ಮಧು ಬಂಗಾರಪ್ಪ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಹೊಸ ಅಭ್ಯರ್ಥಿಗಾಗಿ ಹುಡುಕಾಟ

ಹೊಸ ಅಭ್ಯರ್ಥಿಗಾಗಿ ಹುಡುಕಾಟ

ಸಾಗರ ಕ್ಷೇತ್ರ ಸದ್ಯ ಕಾಂಗ್ರೆಸ್ ಪಕ್ಷದ ವಶದಲ್ಲಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿರುವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕ್ಷೇತ್ರದ ಶಾಸಕರು. ವಯೋ ಸಹಜ ಕಾರಣದಿಂದಾಗಿ ಅವರು 2018ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿಯನ್ನು ಹುಡುಕುವುದು ಕಾಂಗ್ರೆಸ್‌ಗೆ ಪಕ್ಷಕ್ಕೆ ಅನಿವಾರ್ಯ.

4ನೇ ಸ್ಥಾನಕ್ಕೆ ಕುಸಿದಿದ್ದ ಬಿಜೆಪಿ

4ನೇ ಸ್ಥಾನಕ್ಕೆ ಕುಸಿದಿದ್ದ ಬಿಜೆಪಿ

ಸಾಗರ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿತ್ತು. ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರಾವತಿ ಸಿ.ರಾವ್ ಕೇವಲ 5,355 ಮತ ಪಡೆದು 4ನೇ ಸ್ಥಾನಕ್ಕೆ ಕುಸಿದಿದ್ದರು. ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಆರ್.ಜಯಂತ್ 30,712 ಮತ ಪಡೆದಿದ್ದರು.

3ನೇ ಸ್ಥಾನಕ್ಕೆ ಕುಸಿದಿದ್ದ ಬೇಳೂರು ಗೋಪಾಲಕೃಷ್ಣ

3ನೇ ಸ್ಥಾನಕ್ಕೆ ಕುಸಿದಿದ್ದ ಬೇಳೂರು ಗೋಪಾಲಕೃಷ್ಣ

ಸಾಗರ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಜಯಗಳಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬೇಳೂರು ಗೋಪಾಲಕೃಷ್ಣ 3ನೇ ಸ್ಥಾನಕ್ಕೆ ಕುಸಿದಿದ್ದರು.

ಕಾಗೋಡು ತಿಮ್ಮಪ್ಪ - 71,960 ಮತಗಳು
ಬಿ.ಆರ್.ಜಯಂತ್ - 30,712 ಮತಗಳು (ಕೆಜೆಪಿ)
ಬೇಳೂರು ಗೋಪಾಲಕೃಷ್ಣ - 23,217 ಮತಗಳು (ಜೆಡಿಎಸ್)
ಶರಾವತಿ ಸಿ.ರಾವ್ - 5,355 ಮತಗಳು (ಬಿಜೆಪಿ)

English summary
Former minister Hartal Halappa may contest for 2018 Karnataka assembly election form Sagar assembly constituency, Shivamogga district. Belur Gopalakrishna also aspirant for ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X