ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೀರ್ಥಹಳ್ಳಿ-ಕುಂದಾಪುರ ರಸ್ತೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

By Gururaj
|
Google Oneindia Kannada News

ಶಿವಮೊಗ್ಗ, ಆಗಸ್ಟ್ 23 : ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 52 ರಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈ ಮಾರ್ಗದಲ್ಲಿ ಭೂಕುಸಿತ ಉಂಟಾಗುತ್ತಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ತೀರ್ಥಹಳ್ಳಿ-ಕುಂದಾಪುರ ಸಂಪರ್ಕಿಸುವ ರಸ್ತೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ. ಈ ರಸ್ತೆಯ ಭಾಗವು ಎಲ್ಲಾ ವಾಹನಗಳ ದಟ್ಟಣೆಯನ್ನು ಸುರಕ್ಷಿತ ಭಾರ ತಾಳುವ ಸಾಮರ್ಥ್ಯವನ್ನು ಹೊಂದಿಲ್ಲ. ಆದ್ದರಿಂದ, ಸಂಚಾರ ನಿಷೇಧಿಸಲಾಗಿದೆ.

ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್

ನಿಗದಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊರುವ ವಾಹನಗಳು ಹಾಗೂ ನಿಗದಿತ ವಾಹನಗಳ ಸಂಖ್ಯೆಗಿಂತ ಹೆಚ್ಚಿನ ಹೋಗಿ-ಬರುವ ವಾಹನಗಳ ಸಂಚಾರದ ವ್ಯತ್ಯಾಸವಾಗಿ ವಾಹನಗಳ ಸಂಚಾರಕ್ಕೆ ತಡೆಯಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.

Heavy vehicles

ಅಲ್ಲದೇ ಕಳೆದ ವರ್ಷಕ್ಕಿಂತ ಈ ವರ್ಷದ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಭೂಗತ ಜಲಮಟ್ಟ ರಸ್ತೆ ಮೇಲ್ಮೈವರೆಗೆ ಏರಿದ್ದು, ಸುರಕ್ಷಿತ ವಾಹನ ಸಾಂಧ್ರತೆ ಕಡಿಮೆಯಾಗಬೇಕಾಗಿರುವ ಹಿನ್ನೆಲೆಯಲ್ಲಿ ರಸ್ತೆ ಪದರ ಶಿಥಿಲಗೊಂಡು ಸರಕು ಸಾಗಣೆ ಹಾಗೂ ಸಾರ್ವಜನಿಕ ಪ್ರಯಾಣಕ್ಕೆ ತೀವ್ರತರಹದ ಅಡಚಣೆ ಉಂಟಾಗುತ್ತಿದೆ.

ಶಿರಾಡಿ ಘಾಟ್ ರಸ್ತೆ : 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತಶಿರಾಡಿ ಘಾಟ್ ರಸ್ತೆ : 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

ಬುಲೆಟ್ ಟ್ಯಾಂಕರ್ಸ್, ಪಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್‍ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿಎಕ್ಸೆಲ್ ಟ್ರಕ್ಸ್, ಟ್ರಕ್‍ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳನ್ನು ಈ ಹೆದ್ದಾರಿಯಲ್ಲಿ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ.

ಕಾರು, ಜೀಪು, ವ್ಯಾನ್, ಎಲ್.ಸಿ.ವಿ., ಮಿನಿ ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು, ರಾಜಹಂಸ ಬಸ್, ಸಾರ್ವಜನಿಕರು ಪ್ರಯಾಣಿಸುವ ಬಸ್ಸುಗಳ ಸಂಚಾರಕ್ಕೆ ಮಾರ್ಗ ಮುಕ್ತವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

English summary
Shivamogga deputy commissioner K.A.Dayanad banned the movement of heavy vehicles along Tirthahalli-Kundapura state highway no 52. Road closed due to heavy traffic and landslide in after rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X