ಆಕ್ರೋಶ್ ದಿವಸಕ್ಕೆ ಜೆಡಿಎಸ್ ಬೆಂಬಲವಿಲ್ಲ: ದೇವೇಗೌಡ

Posted By:
Subscribe to Oneindia Kannada

ಶಿವಮೊಗ್ಗ, ನವೆಂಬರ್ 27: ನರೇಂದ್ರ ಮೋದಿ ಅವರ ಸರ್ಕಾರ 500 ಹಾಗೂ 1000 ರುಪಾಯಿ ನೋಟುಗಳನ್ನು ನಿಷೇಧಿಸಿರುವುದನ್ನು ವಿರೋಧಿಸಿ ನಡೆಸಲು ಉದ್ದೇಶಿಸಿರುವ ಆಕ್ರೋಶ ದಿವಸಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಕಾಂಗ್ರೆಸ್ ಬೆಂಬಲಿತ ಆಕ್ರೋಶ ದಿವಸಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. [ಆಕ್ರೋಶ್ ದಿವಸ್: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ]

JDS is not supporting Aakrosh Diwas or Bharat Bandh : HD Deve Gowda

ಆದರೆ, ಮೋದಿ ಅವರು ಆತುರದ ಕ್ರಮ ಕೈಗೊಂಡಿದ್ದು, ನೋಟುಗಳ ನಿಷೇಧಿಸುವ ಮುನ್ನ ಸೂಕ್ತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಏಕಾಏಕಿ ನಿಷೇಧ ಮಾಡಿದ್ದರಿಂದ ಸಾಮಾನ್ಯ ಜನರಿಗೆ ಸಮಸ್ಯೆ ಉಂಟಾಗಿದೆ ಎಂದರು.

ಈ ಯೋಜನೆಯಿಂದ ಕೇಂದ್ರ ಸರ್ಕಾರ ಪೂರ್ಣವಾಗಿ ಯಶಸ್ಸು ಕಾಣುತ್ತದೆ ಎಂದು ಈಗಲೇ ಹೇಳಲಾಗುವುದಿಲ್ಲ. ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಆದರೆ, ಜನ ಸಾಮಾನ್ಯರ ಬದುಕಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ದೇವೇಗೌಡ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
JDS supremo HD Deve Gowda today said JDS is not supporting Bharat Bandh or Akrosh Diwas called by Left Parties and Congress against demonetisation initiative by Narendra Modi government.
Please Wait while comments are loading...