ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : ಶಿವಮೊಗ್ಗದಲ್ಲಿ ಹೆಚ್ಚಾಯ್ತು ಕುತೂಹಲ!

Posted By: Gururaj
Subscribe to Oneindia Kannada

ಶಿವಮೊಗ್ಗ, ಏಪ್ರಿಲ್ 09 : ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆಗೆ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಶಿವಮೊಗ್ಗ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ, 2018ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ನಗರದ ಟಿಕೆಟ್ ಘೋಷಣೆ ಮಾಡುವ ಮೂಲಕ ಹೈಕಮಾಂಡ್ ನಾಯಕರು ನಗರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಮತ್ತೊಂದು ಕಡೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಅವರ ಮುಂದಿನ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬೇಳೂರು v/s ಹಾಲಪ್ಪ : ಸಾಗರದ ಬಿಜೆಪಿ ಟಿಕೆಟ್‌ ಯಾರಿಗೆ?

ಶಿವಮೊಗ್ಗ ನಗರ, ಶಿಕಾರಿಪುರ ಹೊರತು ಪಡಿಸಿ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ. ಸಾಗರ ಕ್ಷೇತ್ರದ ಅಭ್ಯರ್ಥಿ ಯಾರು? ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಮತ್ತೊಂದು ಕಡೆ ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರದ ಅಭ್ಯರ್ಥಿಗಳು ಇನ್ನೂ ಅಂತಿಮಗೊಂಡಿಲ್ಲ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಶಿವಮೊಗ್ಗ ಟಿಕೆಟ್ ಗೊಂದಲಕ್ಕೆ ತೆರೆ

ಶಿವಮೊಗ್ಗ ಟಿಕೆಟ್ ಗೊಂದಲಕ್ಕೆ ತೆರೆ

ಶಿವಮೊಗ್ಗ ನಗರಕ್ಕೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಮತ್ತು ಕೆ.ಎಸ್.ಈಶ್ವರಪ್ಪ ನಡುವಿನ ಟಿಕೆಟ್ ಪೈಪೋಟಿಗೆ ತಡೆ ಬಿದ್ದಿದೆ.

‘ಈಶ್ವರಪ್ಪ ಅವರಿಗೆ ಟಿಕೆಟ್ ಸಿಕ್ಕಿರುವುದು ಸಂತಸ ತಂದಿದೆ. ಅವರನ್ನು ಗೆಲ್ಲಿಸಲು ಶ್ರಮವಹಿಸುತ್ತೇನೆ' ಎಂದು ರುದ್ರೇಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ನಗರದ ಟಿಕೆಟ್‌ಗೆ ರುದ್ರೇಗೌಡರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು.

ಈಶ್ವರಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡುವ ಮೂಲಕ ಹೈಕಮಾಂಡ್ ಗೊಂದಲಕ್ಕೆ ತೆರೆ ಎಳೆದಿದೆ. ಆದರೆ, ರುದ್ರೇಗೌಡರ ಮುಂದಿನ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ರುದ್ರೇಗೌಡ ಅವರಿಗೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.

ಸಾಗರ ಕ್ಷೇತ್ರದ ಅಭ್ಯರ್ಥಿ ಯಾರು?

ಸಾಗರ ಕ್ಷೇತ್ರದ ಅಭ್ಯರ್ಥಿ ಯಾರು?

ಶಿವಮೊಗ್ಗ ಜಿಲ್ಲೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವುದು ಸಾಗರ ಕ್ಷೇತ್ರ. ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಮೊದಲ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಟಿಕೆಟ್ ಘೋಷಣೆ ಯಾಗಿಲ್ಲ.

ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಖಚಿತ ಎಂಬ ಸುದ್ದಿ ಹಬ್ಬಿದೆ. ಇದರಿಂದ ಹರತಾಳು ಹಾಲಪ್ಪ ಅವರು ಅಸಮಾಧಾನಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಹಾಲಪ್ಪ ಅವರ ಜೊತೆ ಸಂಧಾನ ಸಭೆ ನಡೆಸಿದ್ದಾರೆ.

ಸೊರಬದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?

ಸೊರಬದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?

ಸೊರಬ ಮಾಜಿ ಸಚಿವ ಹತರಾಳು ಹಾಲಪ್ಪ ಅವರ ಕ್ಷೇತ್ರ. ಆದರೆ, ಈ ಬಾರಿ ಅವರು ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ್ದಾರೆ. ಆದ್ದರಿಂದ, ಕ್ಷೇತ್ರದ ಲೆಕ್ಕಾಚಾರ ಬದಲಾಗಿದೆ.

ಕುಮಾರ್ ಬಂಗಾರಪ್ಪ ಅವರಿಗೆ ಸೊರಬದ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಮೊದಲ ಪಟ್ಟಿಯಲ್ಲಿ ಸೊರಬ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಹಾಲಪ್ಪ ಅವರಿಗೇ ಸೊರಬದ ಟಿಕೆಟ್ ನೀಡಲಾಗುತ್ತದೆಯೇ? ಎಂಬ ಬಗ್ಗೆ ಪ್ರಶ್ನೆ ಎದ್ದಿದೆ.

ತೀರ್ಥಹಳ್ಳಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಇಲ್ಲ

ತೀರ್ಥಹಳ್ಳಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಇಲ್ಲ

ತೀರ್ಥಹಳ್ಳಿಯಲ್ಲಿ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅವರು ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತೀರ್ಥಹಳ್ಳಿಯಲ್ಲಿ ಪಕ್ಷದ ಪರವಾಗಿ ಕೆಲವು ದಿನಗಳ ಹಿಂದೆ ಪ್ರಚಾರ ಮಾಡಿದ್ದರು.

ಆದರೆ, ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಆರಗ ಜ್ಞಾನೇಂದ್ರ ಹೊರತು ಪಡಿಸಿ ಬೇರೆ ಯಾರೂ ಪ್ರಬಲ ಆಕಾಂಕ್ಷಿಗಳಿಲ್ಲ. ಆದರೂ ಸಹ ಏಕೆ ಟಿಕೆಟ್ ಘೋಷಣೆ ಮಾಡಿಲ್ಲ? ಎಂಬುದು ಸದ್ಯದ ಪ್ರಶ್ನೆ.

ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ

ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ

ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಾಗಿ ಹುಟುಕಾಟ ನಡೆಸಿದೆ. ಈ ಎರಡೂ ಕ್ಷೇತ್ರಗಳು ಜೆಡಿಎಸ್ ಪಕ್ಷದವ ವಶದಲ್ಲಿವೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಟಿಕೆಟ್‌ಗೆ 5ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಭದ್ರಾವತಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು? ಎಂಬುದು ಖಚಿತವಾಗಿಲ್ಲ.

ಆದ್ದರಿಂದ, ಬಿಜೆಪಿ ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ರುದ್ರೇಗೌಡ ಅವರಿಗೆ ಭದ್ರಾವತಿ ಕ್ಷೇತ್ರದ ಟಿಕೆಟ್ ಕೊಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈ ಬಗ್ಗೆ ನಾಯಕರು ಯಾವುದೇ ಹೇಳಿಕೆ ನೀಡಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP announced 72 candidates 1st list for Karnataka assembly elections 2018 scheduled on May 12. In home town of B.S.Yeddyurappa Shivamogga district party announced candidate for Shikaripura and Shivamogga city assembly constituency.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ