ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ

Posted By: Gururaj
Subscribe to Oneindia Kannada

ಶಿವಮೊಗ್ಗ, ಏಪ್ರಿಲ್ 16 : ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 218 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ 7 ಕ್ಷೇತ್ರಗಳಿಗೂ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪರಿಚಯ

ಭಾನುವಾರ ರಾತ್ರಿ ಕಾಂಗ್ರೆಸ್ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಮೂವರು ಹಾಲಿ ಶಾಸಕರು ಸೇರಿದಂತೆ ಎಲ್ಲಾ ಏಳು ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮಗೊಳಿಸಲಾಗಿದ್ದು, ಹೊಸ ಮುಖಗಳಿಗೂ ಆದ್ಯತೆ ನೀಡಲಾಗಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಸಾಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಕಾಗೋಡು ತಿಮ್ಮಪ್ಪ ಅವರಿಗೆ ವಯೋಸಹಜ ಕಾರಣದಿಂದಾಗಿ ಟಿಕೆಟ್ ಕೈ ತಪ್ಪಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಕಾಂಗ್ರೆಸ್ ಪಕ್ಷ 85 ವರ್ಷದ ಕಾಗೋಡು ತಿಮ್ಮಪ್ಪ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಶ್ರೀನಿವಾಸ ಕರಿಯಣ್ಣ ಎಂಬ ಹೊಸಬರಿಗೆ ಟಿಕೆಟ್ ನೀಡಲಾಗಿದೆ. ಸೊರಬ ಕ್ಷೇತ್ರದಲ್ಲಿ ರಾಜು ತಲ್ಲೂರು ಅವರಿಗೆ ಟಿಕೆಟ್ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ವಲಸಿಗರಿಗೆ ಮೊದಲ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿದೆ...

ಕಾಗೋಡು ತಿಮ್ಮಪ್ಪ

ಕಾಗೋಡು ತಿಮ್ಮಪ್ಪ

ಸಾಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಗೋಡು ತಿಮ್ಮಪ್ಪ ಅವರನ್ನು 2018ರ ಚುನಾವಣೆ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಮೂಲಕ 80 ವರ್ಷ ಮೀರಿದವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ನಿಯಮವನ್ನು ಪಕ್ಷ ಮುರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರು.

ಕಾಗೋಡು ತಿಮ್ಮಪ್ಪ ಅವರಿಗೆ 85 ವರ್ಷವಾಗಿದೆ. ಆದ್ದರಿಂದ, ಅವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ಸುದ್ದಿಗಳು ಹಬ್ಬಿದ್ದವು. ಕಾಗೋಡು ತಿಮ್ಮಪ್ಪ ಪುತ್ರಿ ನಂದಿನಿ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಂತಿಮವಾಗಿ ಕಾಗೋಡು ತಿಮ್ಮಪ್ಪ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಿಮ್ಮನೆ ರತ್ನಾಕರ

ಕಿಮ್ಮನೆ ರತ್ನಾಕರ

ತೀರ್ಥಹಳ್ಳಿ ಕ್ಷೇತ್ರದಲ್ಲಿ ಹಾಲಿ ಶಾಸಕ ಕಿಮ್ಮನೆ ರತ್ನಾಕರ ಅವರಿಗೆ ಟಿಕೆಟ್ ನೀಡಲಾಗಿದೆ. 2008, 2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಿಮ್ಮನೆ ರತ್ನಾಕರ ಅವರು ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕಿಮ್ಮನೆ ರತ್ನಾಕರ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಸಚಿವ ಸಂಪುಟ ಪುನಾರಚನೆ ಸಮಯದಲ್ಲಿ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರು.

ಕೆ.ಬಿ.ಪ್ರಸನ್ನ ಕುಮಾರ್

ಕೆ.ಬಿ.ಪ್ರಸನ್ನ ಕುಮಾರ್

ಶಿವಮೊಗ್ಗ ನಗರ ಕ್ಷೇತ್ರದಲ್ಲಿಯೂ ಹಾಲಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿತ್ತು.

ಜಿಲ್ಲೆಯ ಕಾಂಗ್ರೆಸ್ ನಾಯಕರು ರಾಜ್ಯ ಮತ್ತು ಹೈಕಮಾಂಡ್‌ ನಾಯಕರಿಗೆ ದೂರು ನೀಡಿದ್ದರು. ಆದರೆ, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಪ್ರಸನ್ನ ಕುಮಾರ್ ಅಂತಿಮವಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆ.ಬಿ.ಪ್ರಸನ್ನ ಕುಮಾರ್ ಅವರು ಈ ಬಾರಿಯ ಚುನಾವಣೆಗೆ ಈಗಾಗಲೇ ಅವರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಜಿ.ಬಿ.ಮಾಲತೇಶ್ ಅಭ್ಯರ್ಥಿ

ಜಿ.ಬಿ.ಮಾಲತೇಶ್ ಅಭ್ಯರ್ಥಿ

ಈ ಬಾರಿಯ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಶಿಕಾರಿಪುರ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜಿ.ಬಿ.ಮಾಲತೇಶ್ (ಗೋಣಿ ಮಾಲತೇಶ್) ಅವರು ಕಾಂಗ್ರೆಸ್ ಅಭ್ಯರ್ಥಿ.

ಮೂರು ದಶಕಗಳ ಕಾಲ ಕಾಂಗ್ರೆಸ್‌ಗೆ ದುಡಿದಿರುವ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ, ಕುರುಬ ಸಮಾಜದ ಮುಖಂಡ ಜಿ.ಬಿ. ಮಾಲತೇಶ್ ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ.

ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಅವರೇ. ಮುಖ್ಯಮಂತ್ರಿ ಅಭ್ಯರ್ಥಿ ಮುಂದೆ ಮಾಲತೇಶ್ ಕಣಕ್ಕಿಳಿಯಲಿದ್ದಾರೆ.

ರಾಜು ತಲ್ಲೂರು ಕಣಕ್ಕೆ

ರಾಜು ತಲ್ಲೂರು ಕಣಕ್ಕೆ

ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ತಲ್ಲೂರು ಅವರು ಸ್ಪರ್ಧಿಸಲಿದ್ದಾರೆ. ರಾಜು ಅವರಿಗೆ ಟಿಕೆಟ್ ನೀಡುವ ಮೂಲಕ ವಲಸಿಗರಿಗೆ ಪಕ್ಷ ಮಣೆ ಹಾಕಿದೆ. ಬಿಜೆಪಿಯಲ್ಲಿದ್ದ ರಾಜು ಅವರು ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ ಪಕ್ಷ ಸೇರಿದ್ದರು.

ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ ಬಳಿಕ ಪಕ್ಷದ ಮೂಲ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ರಾಜು ತಲ್ಲೂರು ಅವರು ಬಿಜೆಪಿ ತೊರೆದಿದ್ದರು. ಈಗ ಅವರು ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿ.ಕೆ.ಸಂಗಮೇಶ್ ಅಭ್ಯರ್ಥಿ

ಬಿ.ಕೆ.ಸಂಗಮೇಶ್ ಅಭ್ಯರ್ಥಿ

ಭದ್ರಾವತಿ ಕ್ಷೇತ್ರಕ್ಕೆ ಮಾಜಿ ಶಾಸಕ ಬಿ.ಕೆ.ಸಂಗಮೇಶ್ ಅವರು ಕಾಂಗ್ರೆಸ್ ಅಭ್ಯರ್ಥಿ. 2004, 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿ.ಕೆ.ಸಂಗಮೇಶ್ ಜಯಗಳಿಸಿದ್ದರು. ಆದರೆ, 2013ರಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ್ತು.

ಕಳೆದ ಚುನಾವಣೆಯಲ್ಲಿ ಸಿ.ಎಂ.ಇಬ್ರಾಹಿಂ ಅವರು ಭದ್ರಾವತಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕಾರಣ ಬಿ.ಕೆ.ಸಂಗಮೇಶ್ ಅವರಿಗೆ ಟಿಕೆಟ್ 'ಕೈ' ತಪ್ಪಿತ್ತು. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 34,271 ಮತಗಳನ್ನು ಪಡೆದಿದ್ದರು. ಈ ಬಾರಿ ಪುನಃ ಕಾಂಗ್ರೆಸ್ ಟಿಕೆಟ್ ನೀಡಿದೆ.

ಹೊಸ ಅಭ್ಯರ್ಥಿ ಪರಿಚಯಿಸಿದ ಪಕ್ಷ

ಹೊಸ ಅಭ್ಯರ್ಥಿ ಪರಿಚಯಿಸಿದ ಪಕ್ಷ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಹೊಸ ಅಭ್ಯರ್ಥಿಯನ್ನು ಪರಿಚಯಿಸಿದೆ. ಡಾ.ಶ್ರೀನಿವಾಸ ಕರಿಯಣ್ಣ ಅವರು ಕ್ಷೇತ್ರದಿಂದ 2018ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಶ್ರೀನಿವಾಸ ಕರಿಯಣ್ಣ ಅವರಿಗೆ ರಾಜಕೀಯ ಹೊಸದು.

ಡಾ.ಶ್ರೀನಿವಾಸ ಕರಿಯಣ್ಣ ಅವರು ಮಾಜಿ ಶಾಸಕ ಕರಿಯಣ್ಣ ಅವರ ಪುತ್ರರು. ತಂದೆಯ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ಅವರು ನೋಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Congress announced 1st list of candidates for Karnataka assembly elections 2018. In Shivamogga district candidates announced for all 7 assembly constituency. Here are the candidates brief profiles of the district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ