ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರಿಚಯ

|
Google Oneindia Kannada News

ಶಿವಮೊಗ್ಗ, ಏಪ್ರಿಲ್ 18 : ಶಿವಮೊಗ್ಗ ಜಿಲ್ಲೆಯ 2018ರ ಚುನಾವಣಾ ಕಣ ಅಂತಿಮಗೊಂಡಿದೆ. ಮೂರು ಪಕ್ಷಗಳು 7 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿವೆ. ಬಿಜೆಪಿ ಭದ್ರಾವತಿ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕರ್ನಾಟಕ ರಾಜಕೀಯದ ಚಿತ್ರಣ ಬದಲಿಸಬಲ್ಲ ಆ 10 ಕ್ಷೇತ್ರಗಳುಕರ್ನಾಟಕ ರಾಜಕೀಯದ ಚಿತ್ರಣ ಬದಲಿಸಬಲ್ಲ ಆ 10 ಕ್ಷೇತ್ರಗಳು

ಶಿವಮೊಗ್ಗ ಜಿಲ್ಲೆಯ ರಾಜಕಾರಣ ಪ್ರತಿ ಚುನಾವಣೆಯಲ್ಲಿಯೂ ರಾಜ್ಯದ ಗಮನ ಸೆಳೆಯುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆ, ಸೊರಬದಲ್ಲಿ ಸಹೋದರರ ಮುಖಾಮುಖಿಯ ಕಾರಣದಿಂದಾಗಿ ಕದನ ಕುತೂಹಲ ಮೂಡಿಸಿದೆ.

ಶಿವಮೊಗ್ಗ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪರಿಚಯಶಿವಮೊಗ್ಗ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪರಿಚಯ

ಹಾಲಿ ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಬಾರಿಯ ಚುನಾವಣೆಗೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಅವರೇ. ಆದ್ದರಿಂದ, ಶಿಕಾರಿಪುರ ಕ್ಷೇತ್ರದ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ.

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ

ಸೊರಬ ಕ್ಷೇತ್ರದಲ್ಲಿ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ (ಜೆಡಿಎಸ್), ಕುಮಾರ್ ಬಂಗಾರಪ್ಪ (ಬಿಜೆಪಿ) ಮುಖಾಮುಖಿಯಾಗಿದ್ದಾರೆ. ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಬಿ.ಎಸ್.ಯಡಿಯೂರಪ್ಪ

ಬಿ.ಎಸ್.ಯಡಿಯೂರಪ್ಪ

ಹಾಲಿ ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿರುವ ಅವರು, 2018ರ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ.

ಶಿಕಾರಿಪುರ ಕ್ಷೇತ್ರದಲ್ಲಿ 8 ಬಾರಿ ಚುನಾವಣೆ ಎದುರಿಸಿರುವ ಬಿ.ಎಸ್.ಯಡಿಯೂರಪ್ಪ ಒಂದು ಬಾರಿ ಮಾತ್ರ ಸೋಲು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 24,425 ಮತಗಳ ಅಂತರದಿಂದ ಜಯಗಳಿಸಿದ್ದರು.

ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ.ವೈ.ರಾಘವೇಂದ್ರ. ತಂದೆಗಾಗಿ ಈ ಬಾರಿ ಅವರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ತಂದೆಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಹೊತ್ತುಕೊಂಡಿದ್ದಾರೆ.

ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಕ್ಷೇತ್ರದಲ್ಲಿ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅವರು ಅಭ್ಯರ್ಥಿ. 1994, 1999, 2004 ರ ಚುನಾವಣೆಯಲ್ಲಿ ಜಯಗಳಿಸಿದ್ದ ಅವರು 2008, 2013ರ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ 34,446 ಮತಗಳನ್ನು ಪಡೆದು ಸೋಲು ಕಂಡಿದ್ದರು.

ಎಂಪಿಎಂ ಅಧ್ಯಕ್ಷರಾಗಿ, ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷರಾಗಿ ಆರಗ ಜ್ಞಾನೇಂದ್ರ ಅವರು ಕಾರ್ಯ ನಿರ್ವಹಿಸಿದ್ದಾರೆ. ‘ದೆಹಲಿಗೆ ನರೇಂದ್ರ, ತೀರ್ಥಹಳ್ಳಿಗೆ ಜ್ಞಾನೇಂದ್ರ' ಎಂಬ ಘೋಷವಾಕ್ಯದಡಿ ಈ ಬಾರಿ ಅವರು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ನಗರ ಕ್ಷೇತ್ರದಿಂದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಅಭ್ಯರ್ಥಿ. 2013ರ ಚುನಾವಣೆಯಲ್ಲಿ 33,462 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು.

2008ರ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧಿಸಿದ್ದ ಅವರು 58,982 ಮತಗಳನ್ನು ಪಡೆದು ಜಯಗಳಿಸಿದ್ದರು. ಕಂದಾಯ, ವಿದ್ಯುತ್ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಈ ಬಾರಿ ಕ್ಷೇತ್ರದ ಟಿಕೆಟ್ ಅವರ ಕೈ ತಪ್ಪಲಿದೆ ಎಂಬ ಸುದ್ದಿ ಹಬ್ಬಿತ್ತು. ಅಂತಿಮವಾಗಿ ಅವರು ಅಭ್ಯರ್ಥಿಯಾಗಿದ್ದಾರೆ.

ಕುಮಾರ್ ಬಂಗಾರಪ್ಪ

ಕುಮಾರ್ ಬಂಗಾರಪ್ಪ

ಸೊರಬ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಪುತ್ರ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅವರು 33,176 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈಗ ಅವರು ಬಿಜೆಪಿ ಸೇರಿದ್ದಾರೆ.

2004ರಲ್ಲಿ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 44,677 ಮತಗಳನ್ನು ಪಡೆದು ಜಯಗಳಿಸಿದ್ದರು. 2008ರಲ್ಲಿ 32,499 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಮಧು ಬಂಗಾರಪ್ಪ ಅವರ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ಹರತಾಳು ಹಾಲಪ್ಪ

ಹರತಾಳು ಹಾಲಪ್ಪ

ಸೊರಬ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಮಾಜಿ ಸಚವ ಹರತಾಳು ಹಾಲಪ್ಪ ಅವರು ಈ ಬಾರಿ ಸಾಗರ ಕ್ಷೇತ್ರಕ್ಕೆ ವಲಸೆ ಬಂದಿದ್ದಾರೆ. 2008ರ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಸ್ಪರ್ಧಿಸಿ 53,552 ಮತಗಳನ್ನು ಪಡೆದು ಜಯಗಳಿಸಿದ್ದರು. ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರೂ ಆಗಿದ್ದರು.

2013ರ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. 37,316 ಮತಗಳನ್ನು ಪಡೆದು ಜೆಡಿಎಸ್‌ನ ಮಧು ಬಂಗಾರಪ್ಪ ಅವರ ವಿರುದ್ಧ ಸೋತಿದ್ದರು. ಈ ಬಾರಿ ಸಾಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಕೆ.ಬಿ.ಅಶೋಕ ನಾಯ್ಕ್

ಕೆ.ಬಿ.ಅಶೋಕ ನಾಯ್ಕ್

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕೆ.ಬಿ.ಅಶೋಕ ನಾಯ್ಕ್ ಅವರು ಬಿಜೆಪಿ ಅಭ್ಯರ್ಥಿ. 2008ರಲ್ಲಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕೆ.ಜಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಆದರೆ, 2013ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. ಈ ಬಾರಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.

English summary
Karnataka BJP announced list of candidates for Shivamogga district 6 assembly constituency out of 7. Candidate yet to announce for Bhadravathi. Here are the brief profiles of candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X