ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿಗೆ ಕುಮಾರ ಬಂಗಾರಪ್ಪ ಎಸೆದ ವಿಚಿತ್ರ ಸವಾಲು!

|
Google Oneindia Kannada News

Recommended Video

Shimoga By-elections 2018 : ರಾಧಿಕಾರನ್ನ ರಾಜಕೀಯಕ್ಕೆ ಕರೆತರುವುದಾಗಿ ಎಚ್ ಡಿ ಕೆಗೆ ಕುಮಾರ್ ಬಂಗಾರಪ್ಪ ಚಾಲೆಂಜ್

ಶಿವಮೊಗ್ಗ, ಅಕ್ಟೋಬರ್ 30: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಬಾಂಬ್ ಸಿಡಿಸಿರುವ ಸೊರಬ ಶಾಸಕ ಕುಮಾರ್ ಬಂಗಾರಪ್ಪ, ರಾಧಿಕಾರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತೆ ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ತಮ್ಮ ಕಟುಂಬದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಮಾರ್ ಬಂಗಾರಪ್ಪ, ಕುಮಾರಸ್ವಾಮಿಯವರು ಎಚ್ಚರದಿಂದ ಇರಬೇಕು ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಮಿಟೂ ಬಾಂಬ್ ಸಿಡಿಯುವ ಸಾಧ್ಯತೆ ಇದೆ.

ಶಿವಮೊಗ್ಗ ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ! ಶಿವಮೊಗ್ಗ ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ!

ಸಾಮಾಜಿಕ ಜಾಲತಾಣ ಈಗಾಗಲೇ ಅವರ ಮತ್ತೊಂದು ಕುಟುಂಬದ ಫೋಟೊಗಳು ಓಡಾಡುತ್ತಿವೆ, ಅವರಿಗೆ ಧೈರ್ಯವಿದ್ದರೆ ಹಾಸನದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಿ ಅಥವಾ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

Kumar Bangarappa challenges HDK to bring Radhika into politics

ಕುಮಾರಸ್ವಾಮಿ ಅವರ ಕುಟುಂಬದಲ್ಲಿ ಈಗಾಗಲೇ ಒಬ್ಬ ಪತ್ನಿ ರಾಮನಗರದಿಂದ ಸ್ಪರ್ಧಿಸುತ್ತಿದ್ದಾರೆ, ಅವರ ಕುಟುಂಬದ ಸದಸ್ಯರು ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.ಹಾಗೆಯೇ ರಾಧಿಕಾರನ್ನು ಯಾಕೆ ಚುನಾವಣಾ ಪ್ರಚಾರಕ್ಕೆ ಕರೆಸಿಕೊಳ್ಳಬಾರದು ಎಂದರು.

ಶಿವಮೊಗ್ಗ ಚುನಾವಣೆ ಪ್ರಚಾರ ಎಸ್.ಬಂಗಾರಪ್ಪ ಸುತ್ತ ಗಿರಕಿ ಹೊಡೆಯುತ್ತಿದೆ ಶಿವಮೊಗ್ಗ ಚುನಾವಣೆ ಪ್ರಚಾರ ಎಸ್.ಬಂಗಾರಪ್ಪ ಸುತ್ತ ಗಿರಕಿ ಹೊಡೆಯುತ್ತಿದೆ

ಬೇರೆಯವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವ ಕುಮಾರಸ್ವಾಮಿಯವರಿಗೆ ತಮ್ಮ ಬಗ್ಗೆ ಗೊತ್ತಿರಬೇಕು, ಇಂತಹ ರಾಜಕಾರಣ ಸರಿಯಲ್ಲ, ಮುಂದಿನ ದಿನಗಳಲ್ಲಿ ಅವರು ಇದಕ್ಕೆ ಬೆಲೆ ತೆರಬೇಕಾದೀತು ಎಂದಿದ್ದಾರೆ.

ಮಧು ಬಂಗಾರಪ್ಪಗೆ ಹಲವು ಪ್ರಶ್ನೆ ಕೇಳಿದ ಕುಮಾರ್ ಬಂಗಾರಪ್ಪ! ಮಧು ಬಂಗಾರಪ್ಪಗೆ ಹಲವು ಪ್ರಶ್ನೆ ಕೇಳಿದ ಕುಮಾರ್ ಬಂಗಾರಪ್ಪ!

ನಿನ್ನೆಯಷ್ಟೇ ಬಹಿರಂಗ ಪ್ರಚಾರದಲ್ಲಿ ಭಾಗಿಯಾಗಿದ್ದ ಕುಮಾರಸ್ವಾಮಿ ಕುಮಾರ ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆ ವೇಳೆ ದಿವಂಗತ ಬಂಗಾರಪ್ಪ ಅವರನ್ನು ಕುಮಾರ್ ಬಂಗಾರಪ್ಪ ಅವರು ಮನೆಯಿಂದ ಓಡಿಸಿದ್ದರು ಎಂದು ಹೇಳಿದ್ದರು. ಅದಕ್ಕೆ ಕುಮಾರ್ ಬಂಗಾರಪ್ಪ ರಾಧಿಕಾ ಅವರ ಹೆಸರು ಬಳಸಿ ವಾಗ್ದಾಳಿ ನಡೆಸಿದ್ದಾರೆ.

English summary
Bjp MLA Kumar Bangarappa has challenged chief minister H.D. Kumaraswamy to being Radhika Kumarswamy to politics and also warned latter would face #me too allegation
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X