ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ : ಡಿ.14ರಂದು ಸಾಗರ ಬಂದ್, ನಿಷೇಧಾಜ್ಞೆ ಹೇರಿಕೆ

|
Google Oneindia Kannada News

ಶಿವಮೊಗ್ಗ, ಡಿಸೆಂಬರ್. 13 : ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದ ಕಿಚ್ಚು ಪಕ್ಕದ ಜಿಲ್ಲೆ ಶಿವಮೊಗ್ಗಕ್ಕೆ ಹಬ್ಬಿದೆ. ಡಿ.14ರಂದು ಸಾಗರ ಬಂದ್‌ಗೆ ಕರೆ ನೀಡಲಾಗಿದೆ.

ಹೊನ್ನಾವರದಲ್ಲಿ ಡಿ.18ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆಹೊನ್ನಾವರದಲ್ಲಿ ಡಿ.18ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಪರೇಶ್ ಮೇಸ್ತ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಡಿ.14ರ ಗುರುವಾರ ಸಾಗರ ಬಂದ್‌ಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಸಾಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಲಾಗಿದೆ.

Paresh Mesta case : Sagar bandh on Dec 14, Section 144 imposed

ಡಿ.8ರಂದು ಪರೇಶ್ ಮೇಸ್ತ ಶವ ಸಿಕ್ಕ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ವೇಳೆ ಕುಮಟಾ, ಶಿರಸಿಯಲ್ಲಿ ಹಿಂಸಾಚಾರ ನಡೆದಿತ್ತು.

ಪರೇಶ್ ಮೇಸ್ತ: ಡಿ. 13, 14ರಂದು ರಾಜ್ಯಾದ್ಯಂತ ವಿಎಚ್‌ಪಿ ಪ್ರತಿಭಟನೆಪರೇಶ್ ಮೇಸ್ತ: ಡಿ. 13, 14ರಂದು ರಾಜ್ಯಾದ್ಯಂತ ವಿಎಚ್‌ಪಿ ಪ್ರತಿಭಟನೆ

ಉತ್ತರ ಕನ್ನಡ ಪಕ್ಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿಯೂ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೇರಿದೆ.

ಪರೇಶ್ ಮೇಸ್ತ ಸಾವಿನ ಪ್ರಕರಣ ಸಿಬಿಐ ತನಿಖೆಗೆ ಪರೇಶ್ ಮೇಸ್ತ ಸಾವಿನ ಪ್ರಕರಣ ಸಿಬಿಐ ತನಿಖೆಗೆ

ಪರೇಶ್ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಹೇಳಿದ್ದಾರೆ.

English summary
Shivamogga district administration has imposed restrictions under Section 144 in Sagara on December 14, 2017 following bandh called for condemn the killing of Paresh Mesta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X