ಶಿವಮೊಗ್ಗ: ಬಿಜೆಪಿ ಅಧ್ಯಕ್ಷನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Posted By:
Subscribe to Oneindia Kannada

ಶಿವಮೊಗ್ಗ, ಸೆಪ್ಟೆಂಬರ್ 12 : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಿಜೆಪಿ ಅಧ್ಯಕ್ಷರ ಮನೆ ಮೇಲೆ ದುಷ್ಕರ್ಮಿಗಳು ಸೋಮವಾರ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.

ಶಿವಮೊಗ್ಗ : ಅಕ್ಟೋಬರ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಶಿರಾಳಕೊಪ್ಪ ಪಟ್ಟಣದ ಬಿಜೆಪಿ ಅಧ್ಯಕ್ಷರ ಮಂಚಿ ಶಿವಾನಂದ ಅವರ ಮನೆಯ ಮೇಲೆ ದುಷ್ಕರ್ಮಿಗಳು ಸೋಮವಾರ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಬೆಂಕಿ ಹಚ್ಚಿ ಮನೆಯ ಮುಂಭಾಗದಲ್ಲಿ ಎಸೆದಿದ್ದಾರೆ.

Petrol bomb hurled on Shiralakoppa BJP president house

ಪರಿಣಾಮ ಮನೆಯ ಮುಂಭಾಗ ಇದ್ದ ಪ್ಲಾಸ್ಟಿಕ್ ಕುರ್ಚಿ ಮತ್ತು ಬಟ್ಟೆಗಳು ಸುಟ್ಟು ಹೋಗಿವೆ. ಘಟನೆಯಲ್ಲಿ ಯಾರಿಗೂ ಯಾವುದೇ ತೊಂದರೆ ಆಗಿಲ್ಲ.

ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದನ್ನರನ್ನು ಶಿವಾನಂದ್ ಮತ್ತು ಇನ್ನಿತರರು ತಡೆದು ಪೊಲೀಸರಿಗೆ ಒಪ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ರಾತ್ರಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Miscreants attacked petrol bomb on Shiralakoppa BJP president house, Shivamagga District, on Sept 11 mid night.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ