ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ : ಕಲುಷಿತ ನೀರು ಕುಡಿದು 2 ಸಾವು, 40 ಮಂದಿ ಅಸ್ವಸ್ಥ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 12 : ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಅಸ್ವಸ್ಥರಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಯೇ ಕುಡಿಯುವ ನೀರು ಸರಬರಾಜು ಮಾಡಿತ್ತು.

ಭದ್ರಾವತಿ ಸಮೀಪದ ಮೈದೊಳಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಶಿವಪ್ಪ (75), ಹನುಮಂತಪ್ಪ (42) ಎಂದು ಗುರುತಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಿತ್ತು.

ನೀರು ಕುಡಿದ ಹಲವರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. 19ಕ್ಕೂ ಹೆಚ್ಚು ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೀರು ಪೂರೈಕೆ ಮಾಡುವ ಟ್ಯಾಂಕರ್‌ಗೆ ಕಲುಷಿತ ನೀರು ಸೇರ್ಪಡೆಯಾಗಿದ್ದು ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.

Polluted drinking water : 2 dead in Bhadravathi

ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Two dead and more than 20 fall ill in Hollehonnur, Bhadravathi after drinking suspected polluted water. Grama Panchayat supplied water to Mydolalu village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X