ಭದ್ರಾವತಿ : ಮೈದೊಳಲು ಗ್ರಾಮದಲ್ಲಿ ಮತ್ತೊಂದು ಸಾವು

Posted By: Gururaj
Subscribe to Oneindia Kannada

ಶಿವಮೊಗ್ಗ, ಫೆಬ್ರವರಿ 14 : ಭದ್ರಾವತಿ ಸಮೀಪದ ಮೈದೊಳಲು ಗ್ರಾಮದಲ್ಲಿ ಸಾವಿನ ಸರಣಿ ಮುಂದುವರೆದಿದೆ. ಕಲುಷಿತ ನೀರು ಕುಡಿದು ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ನೀರು ಕುಡಿದು ಅಸ್ವಸ್ಥಗೊಂಡಿದ್ದ 72 ವರ್ಷ ಇಸ್ಮಾಯಿಲ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಶಿವಮೊಗ್ಗ : ಕಲುಷಿತ ನೀರು ಕುಡಿದು 2 ಸಾವು, 40 ಮಂದಿ ಅಸ್ವಸ್ಥ

ಫೆಬ್ರವರಿ 11ರಂದು ಕಲುಷಿತ ಕುಡಿಯುವ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದರು. 40ಕ್ಕೂ ಅಧಿಕ ಜನರು ಶಿವಮೊಗ್ಗ ನಗರದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Polluted drinking water : One more dies in Mydolalu village Bhadravathi

ಭದ್ರಾವತಿ ಸಮೀಪದ ಮೈದೊಳಲು ಗ್ರಾಮಕ್ಕೆ ಟ್ಯಾಂಕರ್ ಮೂಲಕ ಗ್ರಾಮ ಪಂಚಾಯಿತಿ ಕುಡಿಯುವ ನೀರು ಸರಬರಾಜು ಮಾಡಿತ್ತು. ಈ ನೀರನ್ನು ಕುಡಿದ ಬಳಿಕ ಹಲವರು ಅಸ್ವಸ್ಥಗೊಂಡಿದ್ದರು.

ಮೈದೊಳಲು ಗ್ರಾಮಕ್ಕೆ ಯಡಿಯೂರಪ್ಪ, ಕಾಗೋಡು ಭೇಟಿ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

'ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ಪರಿಹಾರ, ಅಸ್ವಸ್ಥಗೊಂಡವರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ' ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
72 year old Ismail died in Mydolalu village near Bhadravathi Shivamoga. More than 30 fall ill and 3 people died in Mydolalu village on February 13, 2018

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ