ಶಿವಮೊಗ್ಗ : ಬಿಜೆಪಿ ಬಂಡಾಯ, ಡಾ.ರಾಜು ತಲ್ಲೂರು ರಾಜೀನಾಮೆ

Posted By: ಶಿವಮೊಗ್ಗ ಪ್ರತಿನಿಧಿ
Subscribe to Oneindia Kannada

ಶಿವಮೊಗ್ಗ, ಡಿಸೆಂಬರ್ 26 : ತವರು ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಡಾಯದ ಬಿಸಿ ತಟ್ಟಿದೆ. ಸೊರಬ ತಾಲೂಕು ಬಿಜೆಪಿ ಮುಖಂಡ ಡಾ.ರಾಜು ಎಂ.ತಲ್ಲೂರು ಪಕ್ಷ ತೊರೆದಿದ್ದಾರೆ.

ಶಿವಮೊಗ್ಗದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಡಾ.ರಾಜು ಎಂ.ತಲ್ಲೂರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಬೇಳೂರು v/s ಹಾಲಪ್ಪ : ಸಾಗರದ ಬಿಜೆಪಿ ಟಿಕೆಟ್‌ ಯಾರಿಗೆ?

Rebel trouble for BJP in Soraba, Shivamogga

'ಸೊರಬ ತಾಲೂಕು, ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ. ಪಕ್ಷದ ಮುಖಂಡರು ನನಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ, ರಾಜೀನಾಮೆ ನೀಡಿದ್ದೇನೆ' ಎಂದರು.

ಶಿವಮೊಗ್ಗ ಪರಿವರ್ತನಾ ಯಾತ್ರೆ ವೇದಿಕೆಗೆ ಈಶ್ವರಪ್ಪ ಗುದ್ದಲಿ ಪೂಜೆ

'ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರ್ಪಡೆಗೊಂಡ ಬಳಿಕ ನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಕುಟುಂಬ ರಾಜಕಾರಣವನ್ನು ತಾಲೂಕಿನ ಜನರು ಬೇಡ ವೆನ್ನುತ್ತಿದ್ದಾರೆ ಹಾಗೂ ಕುಮಾರ್ ಬಂಗಾರಪ್ಪ ಅವರನ್ನು ಶಾಸಕರನ್ನಾಗಿ ಮಾಡಲು ಸಾಧ್ಯವಿಲ್ಲ' ಎಂದು ತಿಳಿಸಿದರು.

ಬೇಳೂರು ಗೋಪಾಲಕೃಷ್ಣ ಕೈ ತಪ್ಪಲಿದೆ ಸಾಗರದ ಟಿಕೆಟ್?

'ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಕಳೆದ 2 ವರ್ಷದಿಂದ ರಾಜ್ಯಾದ್ಯಂತ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೆ' ಎಂದು ಹೇಳಿದರು.

'ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆಗಳಿಗೆ ತಮ್ಮನ್ನು ಹಾಗೂ ನಿಷ್ಟಾವಂತ ಕಾರ್ಯಕರ್ತರನ್ನು ಕರೆಯದೆ ಕಡೆಗಣಿಸಲಾಗಿದೆ. ತಮ್ಮೊಂದಿಗೆ ಸುಮಾರು 10ಕ್ಕೂ ಹೆಚ್ಚು ಪಕ್ಷದ ತಾಲೂಕು ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸುತ್ತಿದ್ದಾರೆ. 2 ದಿನದಲ್ಲಿ 30 ರಿಂದ 40ಕ್ಕೂ ಹೆಚ್ಚು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ' ಎಂದರು.

'ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಅಭಿಮಾನಿಗಳ ಅಪೇಕ್ಷೆಯಾಗಿದೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಆಹ್ವಾನ ಬಂದರೆ ಪರಿಗಣಿಸುತ್ತೇನೆ. ಇಲ್ಲವಾದಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ' ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rebel trouble for BJP in Soraba, Shivamogga district Karnataka ahead of the assembly polls 2018. BJP leader Raju M Tallur resigned for party primary membership.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ