ಶಿವಮೊಗ್ಗ: ಅಡಿಕೆ ಬೆಳೆಗಾರರ ಬೃಹತ್ ಪಾದಯಾತ್ರೆ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಶಿವಮೊಗ್ಗ, ಜುಲೈ, 09: ಅಡಿಕೆ ಮಾರುಕಟ್ಟೆಯ ದರ ಸ್ಥಿರತೆ ಹಾಗೂ ಕೃಷಿ ಸಾಲಮನ್ನಾಕ್ಕೆ ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಘಟಕ ಜುಲೈ 10 ಮತ್ತು 11 ರಂದು ಪಾದಯಾತ್ರೆ ಹಮ್ಮಿಕೊಂಡಿದೆ.

ಜುಲೈ 10ರ ಬೆಳಗ್ಗೆ 9ಕ್ಕೆ ಭದ್ರಾವತಿ ತಾಲೂಕು ಆನವೇರಿಯಿಂದ ಪಾದಯಾತ್ರೆ ಆರಂಭವಾಗಲಿದ್ದು, ಜುಲೈ 11ರ ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.[ಆಮದು ನಿಷೇಧ ಅಡಿಕೆ ಬೆಳೆಗಾರರ ಹಿತ ಕಾಯುವುದೆ?]

areca

ಮೊದಲ ದಿನದ ಪಾದಯಾತ್ರೆ ಚಿಕ್ಕಕೂಡಲಿಯಲ್ಲಿ ಅಂತ್ಯವಾಗಲಿದೆ. ಜುಲೈ 11ರ ಬೆಳಗ್ಗೆ ಅಲ್ಲಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಮುಂದುವರಿಯಲಿದೆ. ಸುಮಾರು 35 ಕಿ.ಮೀ. ಪಾದಯಾತ್ರೆಯಲ್ಲಿ ಸಾವಿರಾರು ರೈತರು ಭಾಗವಹಿಸಲಿದ್ದಾರೆ.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್‌ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]

ಶಾಸಕರಾದ ಎಂ.ಜೆ.ಅಪ್ಪಾಜಿ, ಮಧು ಬಂಗಾರಪ್ಪ, ಶಾರದಾ ಪೂರ್ಯಾ ನಾಯ್ಕ್, ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಗೀತಾ ಶಿವರಾಜ್ ಕುಮಾರ್‌ ಸಹ ಭಾಗವಹಿಸುವ ನಿರೀಕ್ಷೆ ಇದೆ.[ತೆಂಗಿನಕಾಯಿ ಬೆಲೆ ಪ್ರಪಾತಕ್ಕೆ ಕುಸಿಯಲು ಕಾರಣಗಳೇನು?]

ಅಡಿಕೆ ದರ ತಡೆಗೆ ಕ್ರಮ ತೆಗೆದುಕೊಳ್ಳಬೇಕು. ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ರಾಜ್ಯದ ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡಬೇಕು ಎಂದು ಪಾದಯಾತ್ರೆಯಲ್ಲಿ ಒತ್ತಾಯ ಮಾಡಲಾಗುವುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Shivamogga: Arecanut growers, under the aegis of Janata Dal (Secular) will take out a 35km long padayatra from Anaveri village to Shivamogga city on July 10 and 11 to pressurise the Union government to take necessary measures to stabilise the price of arecanut.
Please Wait while comments are loading...