ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ : ಗಣಪತಿ ವಿಸರ್ಜನೆ ವೇಳೆ ಹಲ್ಲೆ, ಕಟ್ಟೆಚ್ಚರ

|
Google Oneindia Kannada News

Recommended Video

Shivamogga : Tomorrow Hindu Maha Sabha Ganapathi Immersion, Tight Security At Shivamogga | Oneindia

ಶಿವಮೊಗ್ಗ, ಸೆಪ್ಟೆಂಬರ್ 04 : ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು ಶಿವಮೊಗ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸೆ.5ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಿವಮೊಗ್ಗ:ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆಶಿವಮೊಗ್ಗ:ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಭಾನುವಾರ ಗಣಪತಿ ವಿಸರ್ಜನೆ ವೇಳೆ ಗೋಪಾಳದ ಶ್ರೀರಾಮನಗರ ಬಡಾವಣೆ, ಹಳೇ ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿ ಸಮೀಪ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದ್ದು, 20 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Shivamogga on high alert over hindu mahasabha ganapathi immersion

ಬಜರಂಗದಳದ ಕಾರ್ಯಕರ್ತ ಉದಯ್ ಮತ್ತು ಸಿದ್ದಪ್ಪ ಮೇಲೆ ಹಲ್ಲೆಯಾಗಿದೆ ಎಂಬ ಸುದ್ದಿ ವಾಟ್ಸಪ್ ಮೂಲಕ ಹರಿದಾಡಿತ್ತು. ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದರು. ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಸೆ.5ರಂದು ಗಣಪತಿ ವಿಸರ್ಜನೆ : ಶಿವಮೊಗ್ಗ ನಗರದಲ್ಲಿ ಸೆ.5ರ ಮಂಗಳವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಗುಪ್ತಚರ ಇಲಾಖೆ ಸಹ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದೆ.

ಶಿಕಾರಿಪುರದಲ್ಲಿ ಬಿಎಸ್ವೈ 'ಶಿಕಾರಿ'ಗೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್?ಶಿಕಾರಿಪುರದಲ್ಲಿ ಬಿಎಸ್ವೈ 'ಶಿಕಾರಿ'ಗೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್?

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ಸಾಗುವ ಮಾರ್ಗದಲ್ಲಿ 120 ಸಿಸಿಟಿವಿಗಳನ್ನು ಹಾಕಲಾಗಿದೆ. ಭಾನುವಾರ ಇಬ್ಬರು ಯುವರಕ ಮೇಲೆ ಹಲ್ಲೆ ನಡೆದ ಘಟನೆ ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರು ಖುದ್ದು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಭಾನುವಾರ ಸಂಜೆ ನಗರದ ವಿವಿಧ ಬೀದಿಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದೆ.

English summary
High alert in Shivamogga for Hindu Mahasabha Ganapathi immersion scheduled on September 5, 2017. Two youths attacked during ganapathi immersion on Sunday and police arrested 5 persons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X