ಸಿದ್ದರಾಮಯ್ಯಗೆ ಕಾರ್ಖಾನೆ ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ: ಬಿಎಸ್ ವೈ

Posted By:
Subscribe to Oneindia Kannada

   ಸಿದ್ದರಾಮಯ್ಯ ಮೇಲೆ ಎಂಥಾ ಆರೋಪ ಹೊರಿಸಿದ್ರು ಬಿ ಎಸ್ ಯಡಿಯೂರಪ್ಪ | Oneindia Kannada

   ಭದ್ರಾವತಿ, ಜನವರಿ 3 : "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ, ಹೊಸದಾಗಿ ರಾಜ್ಯದಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸುವಂತೆ ಮಾಡುವ ಪ್ರಾಮಾಣಿಕ ಪ್ರಯತ್ನವೂ ಇಲ್ಲ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

   ರಾಜ್ಯಕ್ಕೆ ಅಚ್ಛೇದಿನ್ ಯಾವಾಗ ಬರುತ್ತೆ?, ಬಿಎಸ್‌ವೈ ಉತ್ತರ ಹೇಳಿದ್ರು!

   ಇಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಕಾರ್ಖಾನೆಗಳ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ. ಇಲ್ಲಿನ ವಿಐಎಸ್ ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಬಗ್ಗೆ ಸಿದ್ದರಾಮಯ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಆ ಕಾರಣದಿಂದಲೇ ಇವುಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಆರೋಪ ಮಾಡಿದರು.

   Siddaramaiah responsible for worse condition of Bhadravathi factories

   ರಾಜ್ಯದಾದ್ಯಂತ ಬಿಜೆಪಿ ಪರಿವರ್ತನಾ ಯಾತ್ರೆ ನಡೆಸುತ್ತಿರುವ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ಅವರ ವಿರುದ್ಧ ಕಟುವಾದ ಶಬ್ದಗಳಿಂದ ಟೀಕೆ ಮಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದಲೇ ಇಂಥ ಪರಿಸ್ಥಿತಿ ಎದುರಾಗಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ವ್ಯಕ್ತಿತ್ವ ಎಂಬ ಆರೋಪ ಮಾಡಿದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Karnataka chief minister Siddaramaiah responsible for worse condition of Bhadravathi factories, alleges BJP state president BS Yeddyurappa in party rally at Bhadravathi.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ