ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ: ಆಸ್ಪತ್ರೆಗೆ ದಾಖಲು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 16 : ನಗರದ ಗಾಂಧಿ ಪಾರ್ಕ್​​ನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ವಿದ್ಯಾರ್ಥಿ ಚೇತರಿಸಿಕೊಳ್ಳುತ್ತಿದ್ದು, ಚಾಕು ಇರಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಕೆ.ಆರ್​.ಪುರಂ ನಿವಾಸಿ ಶಬರೀಶ, ಹಲ್ಲೆಗೊಳಗಾದ ವಿದ್ಯಾರ್ಥಿ. ಖಾಸಗಿ ಕಾಲೇಜ್​ ಒಂದರಲ್ಲಿ ನಿನ್ನೆ ನಡೆದ ಗಲಾಟೆಯೇ ಚಾಕು ಇರತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student Stabbed in Shivamogga

ಏನಿದು ಘಟನೆ? ಚಾಕು ಇರಿದಿದ್ದೇಕೆ?
ನಗರದ ಖಾಸಗಿ ಕಾಲೇಜಿನಲ್ಲಿ ಕ್ಷುಲಕ ಕಾರಣಕ್ಕೆ, ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗುವ ಮೊದಲು, ಪೊಲೀಸರು ಮಧ್ಯಪ್ರವೇಶಿಸಿದ್ದರು. ಇದರಿಂದ ಕ್ಯಾಂಪಸ್​ ಶಾಂತವಾಗಿತ್ತು.

ಶುಕ್ರವಾರ ಸಂಜೆ ಯುವಕರ ಗುಂಪೊಂದು ಗಾಂಧಿ ಪಾರ್ಕ್​ಗೆ ಆಗಮಿಸಿತ್ತು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಗಲಾಟೆಯಾದ ಖಾಸಗಿ ಕಾಲೇಜಿನ ಹೆಸರು ಹಿಡಿದು ವಿದ್ಯಾರ್ಥಿಗಳನ್ನು ಬೆದರಿಸಿದ್ದಾರೆ. ಈ ವೇಳೆ ಅನ್ಯ ಕಾಲೇಜಿನ ವಿದ್ಯಾರ್ಥಿಯಾದರೂ ಶಬರೀಶನಿಗೆ ಚಾಕು ಇರಿದಿದ್ದಾರೆ ಎಂದು ತಿಳಿದು ಬಂದಿದೆ.

ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಈ.ಕಾಂತೇಶ್​, ಬಿಜೆಪಿ ಮುಖಂಡರಾದ ಚನ್ನಬಸಪ್ಪ, ದತ್ತಾತ್ರಿ ಸೇರಿದಂತೆ ಹಲವರು ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿಯ ಅರೋಗ್ಯ ವಿಚಾರಿಸಿದರು. ಅಲ್ಲದೇ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಈ ಮಧ್ಯೆ, ದುಷ್ಕರ್ಮಿಗಳನ್ನು ಕೂಡಲೇ ಅರೆಸ್ಟ್ ಮಾಡದಿದ್ದರೆ, ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಯ ಪೋಷಕರು ಎಚ್ಚರಿಸಿದ್ದಾರೆ.

English summary
A student of Private college has been stabbed in Gandhi park of Shivamogga, The clash between two groups students was leads to the stab incident friday night. Injured student has been admitted to Meggan hospital for the treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X