ಬಜೆಟ್ ನಲ್ಲಿ ಏಳನೇ ವೇತನ ಆಯೋಗ, ಮಹಿಳೆಯರಿಗೆ ರಕ್ಷಣೆ: ಸಿದ್ದು

Posted By:
Subscribe to Oneindia Kannada

ಶಿವಮೊಗ್ಗ, ಜನವರಿ 20: ಮುಂದಿನ ಬಜೆಟ್ಟಿನಲ್ಲಿ ಏಳನೇ ವೇತನ ಆಯೋಗದ ಘೋಷಣೆ ಮಾಡಲಾಗುವುದು ಹಾಗು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸಿದ ವೇಳೆ ಮಾತನಾಡಿದರು. ಲೋಕಾಯುಕ್ತ ನೇಮಕಕ್ಕೆ ಹಿನ್ನಡೆಯಾಗಿಲ್ಲ, ಈ ಕುರಿತು ಮರುಪರಿಶೀಲಿಸಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ ಮತ್ತು ಅವರೊಂದಿಗೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸಚಿವ ಪ್ರಮೋದ್ ಮಧ್ವರಾಜ್ ಅನೇಕ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಮಹಿಳೆಯುರ ರಕ್ಷಣೆಗೆ ಸಿದ್ದು ಒತ್ತು

ಮಹಿಳೆಯುರ ರಕ್ಷಣೆಗೆ ಸಿದ್ದು ಒತ್ತು

ಮುಂದಿನ ಬಜೆಟ್ಟಿನಲ್ಲಿ ಏಳನೇ ವೇತನ ಆಯೋಗದ ಘೋಷಣೆ ಮಾಡಲಾಗುವುದು, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಜರುಗಿಸಲಾಗುವುದು ಅಲ್ಲದೆ ವಿವಿಧ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದರು.

ಕ್ರೀಡಾ ಸಂಕೀರ್ಣಕ್ಕೆ ಚಾಲನೆ

ಕ್ರೀಡಾ ಸಂಕೀರ್ಣಕ್ಕೆ ಚಾಲನೆ

ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಇಲಾಖೆ ಸಂಯುಕ್ತವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಸಚಿವರಾದ ಕಾಗೋಡು ತಿಮ್ಮಪ್ಪ ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.

ಅಂಬೇಡ್ಕರ್ ಗೆ ನಮನ

ಅಂಬೇಡ್ಕರ್ ಗೆ ನಮನ

ಶಿವಮೊಗ್ಗ ಮಹಾ ನಗರ ಪಾಲಿಕೆ ಆವರಣದಲ್ಲಿ ಡಾ ಅಂಬೇಡ್ಕರ್ ಅವರ ನೂತನ ಪುತ್ಥಳಿಯನ್ನು ಸಿದ್ದರಾಮಯ್ಯ ಅನಾವರಣಗೊಳಿಸಿ, ಮಾಲಾರ್ಪಣೆ ಮಾಡಿದರು.

ಕ್ರೀಡಾಕೂಟಕ್ಕೆ ಸಿಎಂ ಚಾಲನೆ

ಕ್ರೀಡಾಕೂಟಕ್ಕೆ ಸಿಎಂ ಚಾಲನೆ

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ನಂತರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಿಗೆ ಬಣ್ಣ ಬಣ್ಣದ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಸಚಿವರುಗಳಾದ ಪ್ರಮೋದ್ ಮದ್ವರಾಜ್ ಮತ್ತು ಗಣ್ಯರು ಹಾಜರಿದ್ದರು.

ಆರಕ್ಷಕರಿಗೆ ರಕ್ಷೆ

ಆರಕ್ಷಕರಿಗೆ ರಕ್ಷೆ

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಜಿಲ್ಲಾ ಪೊಲಿಸ್ ಗೌರವ ರಕ್ಷೆ ಸ್ವೀಕರಿಸಿದ ಅಮೂಲ್ಯ ಕ್ಷಣ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The announcement will be made in the next budget for the seventh pay commission And action will be taken against violence against women that takes place on says Chief Minister Siddaramaiah.
Please Wait while comments are loading...