ಶಿವಮೊಗ್ಗ : ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Posted By: ಶಿವಮೊಗ್ಗ ಪ್ರತಿನಿಧಿ
Subscribe to Oneindia Kannada

ಶಿವಮೊಗ್ಗ, ನವೆಂಬರ್ 20 : ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೂವರನ್ನು ರಕ್ಷಿಸಲು ಆಂಬ್ಯುಲೆನ್ಸ್‌ನಲ್ಲಿ ಕರೆತರುತ್ತಿದ್ದಾಗ ಅದು ಅಪಘಾತಕ್ಕೀಡಾಗಿದೆ.

ಶಿವಮೊಗ್ಗ ನಗರದ ಅಶೋಕ ರಸ್ತೆಯ ನಿವಾಸಿಗಳಾದ ಪ್ರಧಾನಪ್ಪ (55), ಗೌರಮ್ಮ (48), ಸುಮಾ (25) ಮೃತಪಟ್ಟವರು. ಭಾನುವಾರ ರಾತ್ರಿ ಮೂವರು ಗುಡ್ಡೇಕಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಬೆಂಗಳೂರಿನಲ್ಲಿ ನವ ವಿವಾಹಿತೆ ಆತ್ಮಹತ್ಯೆಗೆ ಶರಣು!

Three of family commit suicide in Shivamogga

ಸಾರ್ವಜನಿಕರನ್ನು ಇವರನ್ನು ನೋಡಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ತುರ್ತು ಚಿಕಿತ್ಸೆ ಅಗತ್ಯ ಬೇಕಾಗಿದ್ದರಿಂದ ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿತ್ತು.

ಆ ಕ್ಷಣ ಯಾರಾದರೊಬ್ಬರು ನಿಲ್ಲಿಸಿ ಮಾತನಾಡಿಸಿದ್ದರೆ!

ಜೈಲು ಸರ್ಕಲ್ ಬಳಿ ಆಂಬ್ಯುಲೆನ್ಸ್‌ಗೆ ಲಕ್ಷ್ಮೀ ಟಾಕೀಸ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಂಬ್ಯುಲೆನ್ಸ್ ಪಲ್ಟಿ ಹೊಡೆದಿದೆ. ಆದರೂ, ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

Three of family commit suicide in Shivamogga

ಚಿಕಿತ್ಸೆ ಫಲಕಾರಿಯಾಗದೆ ಪ್ರಧಾನಪ್ಪ, ಗೌರಮ್ಮ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಸುಮಾಳನ್ನು ಪುನಃ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಆಕೆಯೂ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Three members of a family committed suicide on Sunday, November 19, 2017 in Shivamogga.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ